ಪುಣೆ: ಕೇರಳ “ಮಿನಿ–ಪಾಕಿಸ್ತಾನ”. ಅದಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಗೆಲ್ಲಿಸಲಾಗಿದೆ ಎಂದು ಮಹಾರಾಷ್ಟ್ರದ ಮೀನುಗಾರಿಕಾ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ಅಫ್ಜಲ್ ಖಾನ್ ಎದುರು ಛತ್ರಪತಿ ಶಿವಾಜಿಯ ಗೆಲುವಿನ ವರ್ಷಾಚರಣೆ ವೇಳೆ ಮಾತನಾಡಿದ ಅವರು, ಕೇರಳ ಮಿನಿ ಪಾಕಿಸ್ತಾನವಾಗಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ. ಇವರೆಲ್ಲಾ ಭಯೋತ್ಪಾದಕರ ನೆರವಿನಿಂದ ಸಂಸದರಾಗಿದ್ದಾರೆ ಎಂದು ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತನ್ನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾಣೆ, ಕೇರಳ ಭಾರತದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಕೇರಳನ್ನು ಪಾಕಿಸ್ತಾನಕ್ಕೆ ಹೋಲಿಸಿದ ಹೇಳಿಕೆಯನ್ನು ಸಮರ್ಥಿಸಲು “ಧಾರ್ಮಿಕ ಮತಾಂತರಗಳು” ಮತ್ತು “ಲವ್ ಜಿಹಾದ್” ನಂತಹ ವಿಷಯಗಳನ್ನು ಉಲ್ಲೇಖಿಸಿದ್ದು, ತಮ್ಮ ಹೇಳಿಕೆ ವಾಸ್ತವಿಕವಾಗಿದೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx