ಮಹಾರಾಷ್ಟ್ರ ಸರ್ಕಾರ ರಾಮ ಮಂದಿರಕ್ಕೆ 11 ಕೋಟಿ ರೂಪಾಯಿ ದೇಣಿಗೆ ನೀಡಿದೆ. ರಾಮಕ್ಷೇತ್ರ ಟ್ರಸ್ಟ್‌ಗೆ ಚೆಕ್ ಹಸ್ತಾಂತರಿಸಲಾಗಿದೆ ಎಂದು ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ. ಮಹಾರಾಷ್ಟ್ರದ ಜನರಿಗಾಗಿ ಅಯೋಧ್ಯೆಗೆ ಬಂದಿದ್ದೇವೆ ಎಂದರು. ದೇವಾಲಯದ ಮುಂದಿನ ನಿರ್ಮಾಣ ಕಾರ್ಯಕ್ಕೆ ರಾಜ್ಯದ ಜನತೆಯ ಕೊಡುಗೆಯಾಗಿ ಹಣವನ್ನು ನೀಡಿದರು.
ಉದಯ್ ಸಾಮಂತ್ 11 ಕೋಟಿ ಚೆಕ್ ಅನ್ನು ದೇವಸ್ಥಾನದ ಟ್ರಸ್ಟ್ ಗೆ ಹಸ್ತಾಂತರಿಸಿದರು. ಇದು ಪೂರ್ಣಗೊಂಡ ಬಳಿಕವೇ ಮಾಧ್ಯಮಗಳಿಗೆ ದೇಣಿಗೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಚೆಕ್ ಹಸ್ತಾಂತರ ಸಮಾರಂಭದಲ್ಲಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು.
ರಾಮಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ರಾಮ ಮಂದಿರಕ್ಕಾಗಿ ದೇಣಿಗೆ ನೀಡಿದ ಏಕನಾಥ್ ಶಿಂಧೆ ಅವರಿಗೆ ಧನ್ಯವಾದ ಅರ್ಪಿಸಿದರು. ರಾಮಮಂದಿರ ನಿರ್ಮಾಣಕ್ಕಾಗಿ ಇಷ್ಟು ದೊಡ್ಡ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಚಂಪತ್ ರೈ ಹೇಳಿದ್ದಾರೆ. ಚೆಕ್ ಅನ್ನು ತಕ್ಷಣವೇ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ಧನ್ಯವಾದ ಅರ್ಪಿಸಿದರು.


