nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ

    October 28, 2026

    ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

    October 28, 2026

    ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು

    October 28, 2026
    Facebook Twitter Instagram
    ಟ್ರೆಂಡಿಂಗ್
    • ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ
    • ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
    • ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು
    • ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು
    • ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!
    • ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
    • ದೀಪಾವಳಿಯಲ್ಲಿ ಸಿಹಿ ತಿನ್ನುವ ಆಸೆಯಿದೆಯೇ? ಶುಗರ್ ಫ್ರೀ ಸಿಹಿ ಸಂಪೂರ್ಣ ಸುರಕ್ಷಿತವೇ? ಮಧುಮೇಹಿಗಳು ತಿಳಿಯಬೇಕಾದ ಸಂಗತಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ
    ರಾಷ್ಟ್ರೀಯ ಸುದ್ದಿ August 14, 2022

    ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ

    By adminAugust 14, 2022No Comments1 Min Read
    maharastra

    ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ. ಮುಂದುವರೆದಿದ್ದು ಕೃಷ್ಣಾನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರವಾಹ ತಲೆದೋರಿದೆ. ಕಳೆದ 15 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿದ್ದ ಮಳೆಯಿಂದ ಹೈರಾಣಾಗಿದ್ದ ಉತ್ತರ ಕರ್ನಾಟಕದ ಜನ ಈಗ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಈಡಾಗಿದ್ದಾರೆ.

    ಬೆಳಗಾವಿ, ಬಾಗಲಕೋಟೆ, ಗೋಕಾಕ್ ಸೇರಿದಂತೆ ವಿವಿಧೆಡೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊಲಗದ್ದೆಗಳು ಜಲಾವೃತಗೊಂಡು ಮಾರುಕಟ್ಟೆಗಳಿಗೆ ನೀರು ನುಗ್ಗಿದೆ.ಕಳೆದ ಪ್ರವಾಹ ಸಂಕಷ್ಟದಿಂದ ಇನ್ನೂ ಜನ ಚೇತರಿಸಿಕೊಂಡಿಲ್ಲ. ಈಗ ಪ್ರವಾಹ ಎದುರಾಗುತ್ತಿರುವುದು ಜನರನ್ನು ಮತ್ತಷ್ಟು ಭೀತಿಗೆ ತಳ್ಳಿದೆ. ಯಾದಗಿರಿ ಜಿಲ್ಲೆಯ ಭೀಮಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಭೀಮಾ ತೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

    ಬ್ಯಾರೇಜ್‍ನಿಂದ 35 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆಲಮಟ್ಟಿಯಲ್ಲಿರುವ ಅಣೆಕಟ್ಟಿಗೆ 1.86 ಲಕ್ಷ ಕ್ಯೂಸೆಕ್ಸ್ ನೀರು ಬರುತ್ತಿದ್ದು, 2.25 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಮಹಾರಾಷ್ಟ್ರದಿಂದ ಇನ್ನು ಹೆಚ್ಚಿನ ನೀರು ಬಂದರೆ ಬಹುತೇಕ ಗ್ರಾಮಗಳು ಮುಳುಗಡೆ ಎದುರಿಸಬೇಕಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೊಟೆ, ಜಮಖಂಡಿ, ರಬಕವಿ, ಬನಹಟ್ಟಿ ಹಲವು ಗ್ರಾಮಗಳಿಗೆ ಮುಳುಗಡೆ ಭೀತಿ ಎದುರಾಗಿದೆ.

    ಇತ್ತ ಕಾಫಿನಾಡು ಚಿಕ್ಕಮಗಳೂರಿನಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಬೆಟ್ಟಗುಡ್ಡಗಳು ಕುಸಿಯುವ ಪ್ರಮಾಣ ಹೆಚ್ಚಾಗಿದೆ. ಹಲವೆಡೆ ಮನೆಗಳು ಕುಸಿದಿವೆ.ಧಾರಾಕಾರ ಮಳೆಯಿಂದ ಬೆಳೆ ಹಾನಿಯಾಗಿದೆ. ನಿರಂತರ ಮಳೆಯಿಂದ ಸಾಕಷ್ಟು ಬೆಳೆ ಹಾನಿಯಾಗಿ ಮನನೊಂದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ನಡೆದಿದೆ.

    ಭಾರೀ ಮಳೆಗೆ ಕೆಮ್ಮಣ್ಣುಗುಂಡಿ ಸಮೀಪ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಹಲವೆಡೆ ಮಳೆಯ ಅಬ್ಬರ ಕಡಿಮೆಯಾದರೂ ಅನಾಹುತಗಳು ಮಾತ್ರ ಕಡಿಮೆಯಾಗಿಲ್ಲ. ಬೆಟ್ಟಗುಡ್ಡಗಳ ಕುಸಿತ, ರಸ್ತೆ ಸಂಪರ್ಕ ಕಡಿತ, ತೋಟಗಳ ಮಣ್ಣು ಜರುಗುವುದು ನಡೆಯುತ್ತಲೇ ಇದೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ

    October 28, 2026

    ತುಮಕೂರು: ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಮಾರ್ಚ್ 15, 2026ರಂದು ಕಯಾಕಿಂಗ್ ಕ್ಯಾನೋಯಿಂಗ್ ತರಬೇತಿ…

    ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

    October 28, 2026

    ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು

    October 28, 2026

    ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.