nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ
    • ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
    • ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
    • ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದವರು ಮಹರ್ಷಿ ವಾಲ್ಮೀಕಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ
    ರಾಷ್ಟ್ರೀಯ ಸುದ್ದಿ October 17, 2024

    ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದವರು ಮಹರ್ಷಿ ವಾಲ್ಮೀಕಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

    By adminOctober 17, 2024No Comments2 Mins Read
    valmiki jayanti (1)

    ಕಾರವಾರ: ಶ್ರೀ ಮಹರ್ಷಿ ವಾಲ್ಮೀಕಿ ಅವರು ತಾವು ರಚಿಸಿದ ರಾಮಾಯಣ ಮಹಾಕಾವ್ಯದಲ್ಲಿ ಧರ್ಮ, ಸಾಹಿತ್ಯ, ಪರಿಸರ ರಕ್ಷಣೆ, ಮಹಿಳೆಯರಿಗೆ ಗೌರವ ನೀಡುವುದು ಸೇರಿದಂತೆ ಹಲವು ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.

    ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by
    Provided by

    ನಾರದ ಮುನಿಗಳಿಂದ ಪರಿವರ್ತನೆಗೊಂಡ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯವನ್ನು ರಚಿದರು. ಎಲ್ಲರೂ ಜೀವನದಲ್ಲಿ ಸತ್ಯದ ಪರವಾಗಿ ನಿಂತುಕೊಂಡಾಗ ಮಾತ್ರ ಭವಿಷ್ಯದಲ್ಲಿ ಮುಂದೆ ಬರಲು ಸಾಧ್ಯವಿದೆ. ಸಾಧನೆಯ ಹಾದಿಗೆ ಕಷ್ಟ ಕಾರ್ಪಣ್ಯಗಳು ಅಡ್ಡಿಯಾಗಲಿದ್ದು, ಅವುಗಳನ್ನು ಎದುರಿಸಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದಲ್ಲಿ ಯಶಸ್ಸಿನ ಪ್ರತಿಫಲ ದೊರೆಯಲಿದೆ ಎಂಬುದನ್ನು ರಾಮಾಯಣದಲ್ಲಿ ನೋಡಬಹುದಾಗಿದೆ ಎಂದು ಹೇಳಿದರು.

    ರಾಮಾಯಣದಲ್ಲಿ ಕೇವಲ ಮನುಷ್ಯರಲ್ಲದೇ ಪ್ರಾಣಿ, ಪಕ್ಷಿ, ಪರಿಸರದ ಬಗ್ಗೆ ಬರೆಯಲಾಗಿದೆ. ಅದನ್ನು ಅರಿತುಕೊಂಡು ಅವುಗಳನ್ನು ನಾವೆಲ್ಲರೂ ರಕ್ಷಣೆ ಮಾಡೋಣ ಎಂದರು.

    ಪೊಲೀಸ್ ವರಿಷ್ಠ್ಠಾಧಿಕಾರಿ ಎಂ ನಾರಾಯಣ ಮಾತನಾಡಿ, ಮಾನವ ಸಂಬಂದಗಳಿಗೆ ಬೆಲೆ ಕೊಡಬೇಕು, ಮಹಿಳೆಯರಿಗೆ ರಕ್ಷಣೆ, ಸಮಾನತೆ, ಸಹೋದರತ್ವ ,ಗುರು ಹಿರಿಯರಿಗೆ ಗೌರವ ಕೊಡಬೇಕು ಎಂಬ ಸಾತ್ವಿಕ ಗುಣಗಳು ವಾಲ್ಮೀಕಿಯವರ ರಾಮಾಯಣದಲ್ಲಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಲ್ಲಿವೆ ಎಂದರು.

    ಶಿಕ್ಷಣ, ಉದ್ಯೋಗ, ವ್ಯಾಪಾರದಲ್ಲಿ ಹಿಂದುಳಿದ ಸಮುದಾದವರು ಮುಂದೆ ಬಂದಾಗ ಮಾತ್ರ ಸಂವಿಧಾನ ಮತ್ತು ವಾಲ್ಮೀಕಿ ಅವರ ಆಶಯಗಳು ಈಡೇರಲಿದ್ದು, ಪ್ರತಿಯೊಬ್ಬರೂ ಮಹಾನಾಯಕರ ಆದರ್ಶ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭಾರತವನ್ನು ಜಾತ್ಯತೀತ ರಾಷ್ಟçವಾಗಿ ಮಾಡೋಣ ಎಂದರು.

    ಶಿಕ್ಷಕ ಡಾ.ಗಣೇಶ ಬೀಷ್ಠಣ್ಣನವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿ, ಮಹರ್ಷಿ ವಾಲ್ಮೀಕಿಯನ್ನು ‘ಆದಿ ಕವಿ’ ಎಂದೂ ಕರೆಯುತ್ತಾರೆ. ಆದಿ ಕವಿ ಎಂದರೆ ಮೊದಲ ಕವಿ ಎಂದರ್ಥ. ವಾಲ್ಮೀಕಿ ಅವರು ಶ್ರೀರಾಮನ ವನವಾಸದ ಸಮಯದಲ್ಲಿ ಶ್ರೀರಾಮನೊಂದಿಗೆ ಇದ್ದವರು ಮತ್ತು ನಂತರ ದೇವಿ ಸೀತೆಗೆ ಅವರ ಆಶ್ರಮದಲ್ಲಿ ಆಶ್ರಯ ನೀಡಿದವರು. ಇವರ ಆರಂಭಿಕ ಹೆಸರು ರತ್ನಾಕರ. ಈತ ದರೋಡೆಕೋರನಾಗಿದ್ದ. ದೇವರ್ಷಿ ನಾರದ ಮುನಿಯಿಂದ ಭಗವಾನ್ ರಾಮನ ಮಹಾನ್ ಭಕ್ತನಾಗಿ ರೂಪಾಂತರಗೊಂಡನು ಎಂದರು.

    ವಾಲ್ಮೀಕಿ ಎನ್ನುವ ದಲಿತ ಸಮುದಾಯದ ಬೇಡರ ಕವಿಗೆ ದಕ್ಕಿದ ಈ ಅಪಾರ ಜನಮನ್ನಣೆಯಿಂದಾಗಿ, ಅವನ ಹಿನ್ನೆಲೆಯ ಕುರಿತು ಸಾಕಷ್ಟು ಪುರಾಣಗಳು ಸೃಷ್ಟಿಯಾಗಿರುವುದನ್ನು ನಾವು ಕೇಳಿರುತ್ತೇವೆ ಅಥವಾ ಓದಿರುತ್ತೇವೆ; ದರೋಡೆಕೋರನಾಗಿದ್ದ, ಕ್ರೂರಿಯಾಗಿದ್ದ ರತ್ನಾಕರ ಕ್ರೌಂಚ ಪಕ್ಷಿಯ ಪ್ರಕರಣದಿಂದ ಮನಃಪರಿವರ್ತನೆಯಾದ, ನಾರದ ಮಹರ್ಷಿ ಅವನ ಬದುಕು ಬದಲಾಯಿಸಿದರು. ‘ಮರ ಮರ’ ಮಂತ್ರದಿAದಲೇ ಪ್ರಭಾವಿತನಾಗಿ ರಾಮಾಯಣ ರಚಿಸಿದ, ದೀರ್ಘ ತಪಸ್ಸಿನಿಂದಾಗಿ, ಮೈಮೇಲೆ ಹುತ್ತ ಬೆಳೆದು ಅದರಿಂದ ಅವನಿಗೆ ವಾಲ್ಮೀಕಿ ಎನ್ನುವ ಹೆಸರು ಬಂತು ಎಂದರು.

    ಇದೇ ವೇಳೆ ವಾಲ್ಮೀಕಿ ಸಮಾಜದ ಹಿತರಕ್ಷಣಾ ಸಂಘದ ಅಧ್ಯಕ್ಷ ನಾಗರಾಜ ತಳವಾರ ಹಾಗೂ ಶಿಕ್ಷಕ ಶಿಕ್ಷಕ ಗಣೇಶ ಬೀಷ್ಠಣ್ಣನವರು ಅವರನ್ನು ಸನ್ಮಾನಿಸಲಾಯಿತು.

    ವೇದಿಕೆ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆಗೆ ಉಪ ವಿಭಾಗಧಿಕಾರಿ ಕನಿಷ್ಕ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡುತ್ತಾ, ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ನಗರ ಸಭೆಯ ಪೌರಾಯುಕ್ತ ಜಗದೀಶ್ ಹುಲಗೆಜ್ಜಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಉಮೇಶ ವೈ.ಕೆ., ವಿವಿಧ ಸಂಘಟನೆಯ ಮುಖಂಡರಾದ ದೀಪಕ ಕುಡಾಳಕರ, ಹನುಮಂತಪ್ಪ ತಳವಾರ, ಜೆ.ಡಿ.ಮನೋಜ, ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025
    Our Picks

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್‌ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ  ನಡೆದಿದ್ದು, ಶೂಟಿಂಗ್ ವೊಂದರ ವೇಳೆಯೇ…

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.