ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಸಂಪುಟ ವಿಸ್ತರಣೆ ಮಾಡಿದ್ದಾರೆ. ೧೮ ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರಿಸಿದರು. ಬಿಜೆಪಿ ಮತ್ತು ಶಿವಸೇನೆ ಬಣ ಅಧಿಕಾರಕ್ಕೆ ಬಂದು 40 ದಿನಗಳ ನಂತರ ಸಂಪುಟ ವಿಸ್ತರಣೆ ಮಾಡಲಾಗಿದೆ.
ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಣ ತಲಾ ೯ ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಭಗವಂತ್ ಕೊಶಿಯಾರಿ ಪ್ರಮಾಣ ವಚನ ಬೋಧಿಸಿದರು.
ಶಿವಸೇನೆಯಿಂದ ದಾದಾಜಿ ಭೂಸೆ, ಉದಯ್ ಸಮಂತ್, ಗುಲಾಬ ರಾವ್ ಪಾಟೀಲ್, ಸಂದೀಪನ್ ಭೂಮಾರೆ, ಶಂಭೂರಾಜ್ ದೇಸಾಯಿ, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ವಸಂತ್ ಕೇಸರ್‌ಕರ್ ಹಾಗೂ ಬಿಜೆಪಿಯಿಂದ ಸಂಜಯ್ ರಾಥೊಡ್, ಚಂದ್ರಕಾಂತ್ ಪಾಟೀಲ್ ಸುಧೀರ್ ಮುಂಗುಂತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಂಡೆ, ರಾಧಾಕೃಷ್ಣ ವಿಖೆ ಪಾಟೀಲ್, ಮಂಗಲ್ ಪ್ರಭಾತ್ ಲೋಧಾ, ರವೀಂದ್ರ ಚವ್ಹಾಣ್, ವಿಜಯ್ ಗವಿತ್ ಹಾಗೂ ಅತುಲ್ ಮೊರೇಶ್ವರ್ ಸೇವ್ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ಉಪಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವಿಸ್ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆಯಿದೆ. ಬಿಜೆಪಿಗೆ ಪ್ರಮುಖ ಖಾತೆಗಳನ್ನು ನೀಡಲು ಈ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy