ತುರುವೇಕೆರೆ: ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿದ ಕಳ್ಳರು ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ತುರುವೇಕೆರೆ ತಾಲೂಕು ದಂಡಿನ ಶಿವರ ಹೋಬಳಿಯ ಹಾಲುಗೊಂಡನಹಳ್ಳಿಯಲ್ಲಿ ನಡೆದಿದೆ.
ಸುಜಾತಾ ಎಂಬ ಮಹಿಳೆ ತೋಟಕ್ಕೆ ತೆರಳುತ್ತಿದ್ದ ವೇಳೆ, ಕಳ್ಳತನಕ್ಕೆ ಹೊಂಚು ಹಾಕಿದ್ದ ಕಳ್ಳರು, ಕಣ್ಣಿಗೆ ಖಾರದ ಪುಡಿ ಎರಚಿ ಮಾಂಗಲ್ಯ ಸರವನ್ನು ದೋಚಲು ಯತ್ನಿಸಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಗ್ರಾಮಸ್ಥರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳರನ್ನು ಹಿಡಿದ ಗ್ರಾಮಸ್ಥರು ತಕ್ಷಣವೇ ದಂಡಿನ ಶಿವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವರದಿ: ಸುರೇಶ್ ಬಾಬು ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy