ಮುಂಬೈನ ಕುರ್ಲಾದಲ್ಲಿ ಇತ್ತೀಚೆಗೆ ಭೀಕರ ಗ್ಯಾಂಗ್ ರೇಪ್ ಪ್ರಕರಣ ನಡೆದಿರುವುದು ವರದಿಯಾಗಿದೆ. 42 ವರ್ಷದ ಮಹಿಳೆಯ ಮೇಲೆ ಆಕೆಯ ನಿವಾಸದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಮಹಿಳೆಯ ಅಂಗಾಂಗಕ್ಕೆ ಸಿಗರೇಟ್‌ನಿಂದ ಸುಟ್ಟು, ಹಲ್ಲೆ ಮಾಡಿದ್ದಾರೆ.
ಹರಿತವಾದ ಆಯುಧದಿಂದ ಆಕೆಯ ಮೈ ಕೈ ಗಾಯಗೊಳಿಸಿ ಖಾಸಗಿ ಅಂಗಕ್ಕೆ ಸಿಗರೇಟ್‌ನಿಂದ ಸುಟ್ಟಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅರೋಪಿಗಳು ಹಾಗೂ ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದೂ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳು ಒಬ್ಬರಾದ ಮೇಲೊಬ್ಬರು ಅಸ್ವಾಭಾವಿಕ ಲೈಂಗಿಕ ಕೃತ್ಯ ನಡೆಸಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ.
ಮಹಿಳೆಯ ಖಾಸಗಿ ಅಂಗಕ್ಕೆ ಸಿಗರೇಟ್‌ನಿಂದ ಸುಟ್ಟಿದ್ದು, ಎದೆ ಹಾಗೂ ಎರಡೂ ಕೈಗಳಿಗೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾರೆ. ಆರೋಪಿಯೊಬ್ಬ ಘಟನೆಯ ವೀಡಿಯೊ ರೆಕಾರ್ಡ್ ಮಾಡಿದ್ದು, ಪೊಲೀಸರಿಗೆ ದೂರು ನೀಡದರೆ ವೀಡಿಯೊ ಹರಿಬಿಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಎನ್‌ಜಿಒ ಒಂದಕ್ಕೆ ಮಹಿಳೆ ಕಷ್ಟಗಳನ್ನು ಹೇಳಿಕೊಂಡಿದ್ದು, ಪೊಲೀಸರಿಗೆ ವಿಷಯ ತಿಳಿದ ಬಳಿಕ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದೂ ಕುರ್ಲಾ ಪೊಲೀಸ್ ಸ್ಟೇಷನ್ ಅಧಿಕಾರಿ ಹೇಳಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹಿಡಿಯಲು ಪ್ರಯತ್ನ ನಡೆಸುತ್ತಿದ್ದೇವೆ ಎಂದೂ ಅಧಿಕಾರಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy