ತುಮಕೂರು: ಪಟ್ಟಣದ ಅಶೋಕ ನಗರದಲ್ಲಿರುವ ಮಹೇಶ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಜೆ.ಸಿ.ಐ. ತುಮಕೂರು ಮೆಟ್ರೋ, ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿ.ಯು. ಸಂಸ್ಥೆ ತುಮಕೂರು ಸಹಯೋಗದೊಂದಿಗೆ, ಜಿಲ್ಲೆಯ ಖ್ಯಾತ ಮನಶಾಸ್ತ್ರಜ್ಞೆ ಡಾ.ಪದ್ಮಾಕ್ಷಿ ಲೋಕೇಶ್ ರವರಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮ ಜೀವನ ಶೈಲಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಅನ್ವಯ ಕೋವಿಡ್ 19 ರ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ನಗರದ ಸ್ನೇಹ ಮನೋ ವಿಕಾಸ ಕೇಂದ್ರದ ಮನಃಶಾಸ್ತ್ರಜ್ಞರು ಹಾಗೂ ಮನಶಾಸ್ತ್ರ ಶಿಕ್ಷಣ ತಜ್ಞರಾದ ಡಾ.ಪದ್ಮಾಕ್ಷಿ ಲೋಕೇಶ್ ಅವರು, ರಾಜ್ಯಾದ್ಯಂತ ಮಹೇಶ್ ಪಿಯು ಶಿಕ್ಷಣ ಸಂಸ್ಥೆಯು ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಯಾಗಿದೆ. ನಮ್ಮ ಜಿಲ್ಲೆಯಲ್ಲಿ ಸಹ ಉತ್ತಮ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಈ ದಿನ ಇಂತಹ ಉತ್ತಮ ಶಿಕ್ಷಣ ಸಂಸ್ಥೆಯಲ್ಲಿ,ಈ ಕಾರ್ಯಕ್ರಮವನ್ನು ಆಯೋಜನೆಗೊಂಡಿರುವುದೂ ಸಂತಸದ ವಿಷಯವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇಂಟರ್ನೆಟ್ ಇನ್ನಿತರ ದುಶ್ಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ತಮ್ಮ ತಂದೆ ತಾಯಿಗಳು, ಪೋಷಕರು, ತಮ್ಮ ಮಕ್ಕಳಿಗೆ ಬಹಳ ಕಷ್ಟಪಟ್ಟು ಶಿಕ್ಷಣವನ್ನು ಕೊಡಿಸುತ್ತಾರೆ. ತಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆದು,ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರಬೇಕೆಂದು, ನಾನಾ ರೀತಿಯ ಕಷ್ಟಗಳನ್ನು ದಿನನಿತ್ಯ ಪಡುತ್ತಿರುತ್ತಾರೆ. ಇದನ್ನು ಅರಿಯದ ಮಕ್ಕಳು ಪೋಷಕರಿಗೆ ಅಗೌರವದಿಂದ ನಡೆದುಕೊಳ್ಳುವುದು ಹಾಗೂ ದುಶ್ಚಟಗಳಿಗೆ ಬಲಿಯಾಗುವುದು, ಕೆಟ್ಟ ಆಲೋಚನೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಇದರಿಂದ ಹೊರಬರಲು ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ದೈಹಿಕ ವ್ಯಾಯಾಮ, ಪ್ರಾಣಾಯಾಮ, ಉತ್ತಮವಾದ ಅನೇಕ ಪುಸ್ತಕಗಳನ್ನು ಓದುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ, ಮಹೇಶ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್, ಉಪನ್ಯಾಸಕರುಗಳಾದ ಶ್ರೀನಿವಾಸ್ ಕಲ್ಲೂರು, ಹರೀಶ್, ಜಯರಾಮಯ್ಯ, ಮುಂತಾದವರು ಸಿಬ್ಬಂದಿವರ್ಗ ಹಾಗೂ ರೋಟರಿ ತುಮಕೂರು ಪ್ರೇರಣಾ ಸಂಸ್ಥೆ ಅಧ್ಯಕ್ಷರಾದ, ರಾಜಶೇಖರ್. ಕಾರ್ಯದರ್ಶಿ ಕೃಷ್ಣ ಜಿ.ಎನ್. ಮತ್ತು ಜೆ.ಸಿ.ಐ. ಅಧ್ಯಕ್ಷರಾದ ಸಿಂಧೂ ದರ್ಶನ್.ತರಬೇತಿ ನಿರ್ದೇಶಕರಾದ ಜನಾರ್ದನ್. ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು, ಮುಂತಾದವರು ಭಾಗವಹಿಸಿದ್ದರು.
ವರದಿ: ಸಚಿನ್ ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy