ತಿಪಟೂರು : ಬೆಸ್ಕಾಂ ಇಲಾಖೆಯ ಮಹಿಳಾ ಮಾಪಕ ಸಿಬ್ಬಂದಿಗಳಿಗೆ ಬೆಸ್ಕಾಂ ಇಲಾಖೆ ಕಂದಾಯ ಸಹಾಯಕ ಬಿ.ಕೆ.ಜಗದೀಶ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಅಹೋ ರಾತ್ರಿ ಧರಣಿ ನಡೆಸುತ್ತಿರುವ ಘಟನೆ ನಡೆದಿದೆ.
ನಗರದ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಸೋಮವಾರ ಸಂಜೆಯಿಂದ ಪ್ರತಿಭಟನೆಗೆ ಸಿಬ್ಬಂದಿಗಳು ಮುಂದಾಗಿದ್ದಾರೆ.
ಪ್ರತಿಭಟನೆಯಲ್ಲಿ ವಿಭಾಗೀಯ ಉಪಾಧ್ಯಕ್ಷ ವಿ.ನಂದೀಶ್, ಸಮಿತಿ ಸದಸ್ಯ ಎಂ.ಎಸ್. ಸೋಮಶೇಖರಯ್ಯ ಮತ್ತು ಮಹಿಳಾ ದೂರು ನಿರ್ವಹಣಾ ಸಮಿತಿ ಅಧ್ಯಕ್ಷೆ ವಿ.ಕೆ.ನೇತ್ರಾವತಿ ಮಾತನಾಡಿದರು.
ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ರಾಜಶೇಖರಯ್ಯ, ವಿಭಾಗೀಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಕುಮಾರಸ್ವಾಮಿ,ಉಪ ವಿಭಾಗ ಸಮಿತಿ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ನವೀನ್ ಕುಮಾರ್, ಸಿಬ್ಬಂದಿಗಳಾದ ರವಿ ಕುಮಾರ್ ನಾಯ್ಕ್, ಚಂದ್ರಪ್ಪ ಮತ್ತು ಶಿವಲಿಂಗಸ್ವಾಮಿ ಸೇರಿದಂತೆ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy