ಕೊರಟಗೆರೆ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಆಗತಾನೆ ಜನಿಸಿರುವ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ನಡೆದಿದ್ದು, ಹೆಣ್ಣು ಮಗು ಎನ್ನುವ ಕಾರಣಕ್ಕೋ ಅಥವಾ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಜನಿಸಿದ ಮಗು ಎಂಬ ಕಾರಣಕ್ಕೋ ಮಗುವನ್ನು ಶೌಚಾಲಯ ಹಾಕಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ರಾತ್ರಿ ವೇಳೆ ವೈದ್ಯರು ಹಾಗೂ ಸಿಬ್ಬಂದಿ ಕಡಿಮೆ ಇರುವ ಸಂದರ್ಭದಲ್ಲಿ ಈ ಕೃತ್ಯ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿಸಿ ಕ್ಯಾಮಾರ ದೃಶ್ಯಾವಳಿಗಳಿಂದ ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ದೊರೆಯುವ ಸಾಧ್ಯತೆಗಳಿವೆ.
ಘಟನೆ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಕೊರಟಗೆರೆ ಪೊಲೀಸ್ ಠಾಣೆ ಪಿಎಸ್ ಐ ಮಂಜುಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB