ಹುಬ್ಬಳ್ಳಿ : ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಾಮ್, ಮಲಿಕ್, ಮುಬಾರಕ್ ಬಂಧಿತ ಆರೋಪಿಗಳು. ಬುಕ್ ಫ್ಯಾಕ್ಟರಿ ಕೆಲಸ ಮಾಡ್ತಿದ್ದ 36 ವರ್ಷದ ಮಹಿಳೆ ಮಧ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಿಳೆ ಕಿರುಚಾಡಿದಾಗ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದವರು ಓಡಿ ಬರುತ್ತಲೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ. ಸದ್ಯ ಪೊಲೀಸರು ಪರಾರಿಯಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


