ಬೆಳಗಾವಿ: ಊಟ ಮಾಡಿ ಮಲಗಿದ್ದ ಪತ್ನಿಯನ್ನು ಕುಡಿದ ನಶೆಯಲ್ಲಿ ಗಂಡ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ.
ಯಲ್ಲವ್ವ ಹಾರೂಗೇರಿ (55) ಮೃತ ದುರ್ದೈವಿ. ಪಾಂಡುರಂಗ ಹಾರೂಗೇರಿ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಮಹಿಳೆ ಊಟ ಮಾಡಿ ಮಲಗಿದ್ದಾಗ ಮಚ್ಚಿನಿಂದ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


