ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಕ್ಕೆ ಹೊಡೆದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ.
ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಮಯದ ಬೆಲೆ ಗೊತ್ತಿಲ್ಲದ ಸಚಿವ ಸಂಜೆ ವಿ. ಸೋಮಣ್ಣ 6:30 ಕ್ಕೆ ಸಚಿವರು ಆಗಮಿಸಿದ್ದಾರೆ.
ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಮಹಿಳೆ ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳ ಹೊಡೆದಿದ್ದಾರೆ. ಘಟನೆ ನಂತರ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz