ಮುಂಬೈನ ಕುರ್ಲಾ ಪೂರ್ವದ ಬಂದರ್ ಭವನ ಪ್ರದೇಶದಲ್ಲಿ ಚರಂಡಿಯಲ್ಲಿ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ನಾಗರಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಚೀಲವನ್ನು ವಶಕ್ಕೆ ಪಡೆದು ತೆರೆದರು.
ಅದರಲ್ಲಿ 25 ವರ್ಷದ ಮಹಿಳೆಯ ಶವ ಕಂಡು ಪೊಲೀಸರೇ ಬೆಚ್ಚಿಬಿದ್ದರು. ಮಹಿಳೆಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.
ಇದರಿಂದ ನಿಗೂಢ ವ್ಯಕ್ತಿಗಳು ಮಹಿಳೆಯನ್ನು ಕೊಂದು ಹಗ್ಗದಿಂದ ಕಟ್ಟಿ ಚರಂಡಿಗೆ ಎಸೆದಿರುವುದು ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಇದಕ್ಕಾಗಿ ಆ ಪ್ರದೇಶದಲ್ಲಿ ನಾಪತ್ತೆಯಾಗಿರುವ ಹಾಗೂ ಅಪಹರಣಕ್ಕೊಳಗಾದ ಮಹಿಳೆಯರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಲ್ಲದೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy