ತುಮಕೂರು: ಮಹಿಳಾ ಪ್ರಯಾಣಿಕರನ್ನು ಹತ್ತಿಸಿಕೊಳ್ಳದೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ತಡೆದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಬಸ್ ನ್ನು ಮಹಿಳೆಯರು ತಡೆದರೂ, ಅವರ ಮುಂದೆಯೇ ಬಸ್ ನ್ನು ನುಗ್ಗಿಸಿ ಚಾಲಕ ಉದ್ಧಟತನ ಪ್ರದರ್ಶಿಸಿದ ವಿಡಿಯೋ ಸೆರೆಯಾಗಿದೆ.
ಈ ಘಟನೆ ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಕೊಳ್ಳೇಗಾಲದಿಂದ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಲಕ್ಷ್ಮೀ ದರ್ಶನಕ್ಕೆ ಬಂದಿದ್ದ ಮಹಿಳೆಯರು ಹಾಗೂ ಮಕ್ಕಳು, ದೇವರ ದರ್ಶನ ಮುಗಿಸಿ ವಾಪಸ್ ಕೊಳ್ಳೆಗಾಲದತ್ತ ತೆರಳುವಾಗ ಘಟನೆ ನಡೆದಿದೆ.
ಎರಡು ತಾಸು ಕಾದರೂ ಯಾವುದೇ ಬಸ್ ನಿಲ್ಲಿಸದ ಕಾರಣ ಮಹಿಳೆಯರು ಬಸ್ ಗೆ ಅಡ್ಡಲಾಗಿ ನಿಂತು ಬಸ್ ತಡೆಯಲು ಮುಂದಾಗಿದ್ದಾರೆ. ಈ ವೇಳೆ ಮಹಿಳೆಯರ ಮೇಲೆ ಬಸ್ ಹರಿಸಲು ಸರ್ಕಾರಿ ಬಸ್ ಚಾಲಕ ಮುಂದಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಕೊರಟಗೆರೆ ತಹಶೀಲ್ದಾರ್ ಮುನಿಶಾಮ ರೆಡ್ಡಿ, ಮಹಿಳೆಯರ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದರು. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA