ತುರುವೇಕೆರೆ: ಪಟ್ಟಣದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ರವರ ಕಚೇರಿಯ ಆವರಣದಲ್ಲಿ ಮಹಿಳಾ ಕಾರ್ಯಕರ್ತರಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾಯಸಂದ್ರ ಗ್ರಾಮದ ರಾಜ್ಯ ರೈತ ಸಂಘಟನೆಯ ಚಂದ್ರಶೇಖರ್ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಮಟ್ಟದಲ್ಲೂ ಮಹಿಳೆಯರು ಸಂಘಟಿತರಾಗಬೇಕು, ಬೇರೆ ಪಕ್ಷಗಳು ನೀಡುವ ಸುಳ್ಳು ಆಶ್ವಾಸನೆ ಆಮಿಷಗಳಿಗೆ ಒಳಗಾಗದೆ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಮೆಲ್ ಕಾಂತರಾಜು, ಈ ಕಾರ್ಯಕ್ರಮಕ್ಕೆ ಸೇರಿರುವ ಜನಸಂಖ್ಯೆಯನ್ನು ನೋಡಿದರೆ, 2023ರ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆದ್ದೇ ಗೆಲ್ಲಿಸುತ್ತೀರಿ ಎಂಬ ನಂಬಿಕೆ ಇದೆ, ತುರುವೇಕೆರೆ ತಾಲೂಕಿನಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾ ನಾಯಕಿ ಎಂಬ ಐತಿಹಾಸಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಪುರುಷ ಕಾರ್ಯಕರ್ತರು ಇರುವುದಿಲ್ಲ ಕಾರ್ಯಕ್ರಮವನ್ನು ಮಹಿಳೆಯರೇ ನಡೆಸಬೇಕಾಗುತ್ತದೆ. ಇದರಿಂದ ರಾಜ್ಯಕ್ಕೆ ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷವಿದೆ, ಕಾಂಗ್ರೆಸ್ ಪಕ್ಷಕ್ಕಾಗಿ ಮಹಿಳೆಯರಿದ್ದಾರೆ ಎಂಬ ಸಂದೇಶ ರವಾನೆಯಾಗಬೇಕಾಗಿದೆ ಎಂದರು.
ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೇರಿಸಿರುವ ಬೆಲೆಗಳ ವಿರುದ್ಧ ಉಗ್ರ ಪ್ರತಿಭಟನೆ ಹಾಗೂ ಧರಣಿಯನ್ನು ತಮ್ಮಗಳ ಬೆಂಬಲದೊಂದಿಗೆ ಹಮ್ಮಿಕೊಳ್ಳಲಾಗುವುದು. ತಾವುಗಳು ನಮಗೆ ಮತ್ತು ನಮ್ಮ ಪಕ್ಷಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.
ಈ ಕಾರ್ಯಕ್ರಮದಲ್ಲಿ ಮುಖಂಡರಾದ ನಂಜುಂಡಪ್ಪ , ತಾಲೂಕು ಕೃಷಿಕ ಸಮಾಜದ ಕೆಂಪರಾಜು, ಮಾಳೆಕೃಷ್ಣಪ್ಪ ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹನುಮಂತಯ್ಯ , ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಲಕ್ಷ್ಮೀದೇವಮ್ಮ ,ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿಕಾಂತ್ ಕೊಡಿಗಿ ಹಳ್ಳಿ ಚಂದ್ರಯ್ಯ ಗುಡ್ಡೇನಹಳ್ಳಿ ಗವಿ ರಂಗಪ್ಪ ಮತ್ತಿತರರು ಭಾಗವಹಿಸಿದ್ದರು
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz