ಯಶ್ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿ ಮಂಜುನಾಥನ ದರ್ಶನ ಪಡೆದು ಬಂದಿದ್ದಾರೆ. ಯಶ್ ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಂದ ವಿಡಿಯೋ ಹಾಗೂ ಫೋಟೋಗಳು ಎಲ್ಲಡೆ ವೈರಲ್ ಆಗುತ್ತಿವೆ.
ಯಶ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಲು ಒಂದು ಪ್ರಮುಖ ಕಾರಣ ಇದೆ ಎನ್ನಲಾಗಿದೆ. ಆ ಕಾರಣ ಏನು ಎಂಬುದನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ದರ್ಮಸ್ಥಳ ದರ್ಶನಕ್ಕೆ ಕಾರಣ ಆಗಿದ್ದು ಅವರ ತಂದೆ ಈ ಮೊದಲು ನೀಡಿದ ಹೇಳಿಕೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಯಶ್ ಫ್ಯಾನ್ಸ್ ಇದನ್ನು ವೈರಲ್ ಮಾಡಿದ್ದಾರೆ.
ಯಶ್ ಅವರು ಈ ಮೊದಲು ನೀಡಿದ್ದ ಹೇಳಿಕೆಯನ್ನು ಯಶ್ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಯಶ್ ಅವರು ಅಂದು ಹೇಳಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ‘ನಮ್ಮ ಅಪ್ಪ ಯಾವಾಗಲೂ ಹೇಳುತ್ತಾ ಇರುತ್ತಾರೆ. ಧರ್ಮಸ್ಥಳ ಮಂಜುನಾಥನ ಬೇಡಿಕೋ ಎಲ್ಲದೂ ಆಗುತ್ತದೆ. ಆ ನಂಬಿಕೆಯಲ್ಲಿ ಬೆಳೆದು ಬಂದವರು ನಾವು. ಸಂಪೂರ್ಣ ಕರ್ನಾಟಕ ಆ ನಂಬಿಕೆಯಲ್ಲಿ ಬದುಕುತ್ತಾ ಇದೆ. ನನಗೆ ಇದ್ದಿದ್ದು ಒಂದೇ ನಂಬಿಕೆ ಎಂದರೆ ಮಂಜುನಾಥ ಸ್ವಾಮಿ ಕೈ ಬಿಡಲ್ಲ ಎಂದು’ ಎಂದು ಯಶ್ ಅವರು ಈ ಮೊದಲು ಹೇಳಿಕೊಂಡಿದ್ದರು. ಈಗ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭ ಆಗುತ್ತಿರುವುದರಿಂದ ಅವರು ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.
ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಯಶಸ್ಸು ಕಂಡರು. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಈಗ ಯಶ್ ಅವರ ಸಂಪೂರ್ಣ ಗಮನ ‘ಟಾಕ್ಸಿಕ್’ ಚಿತ್ರದ ಮೇಲೆ ಇದೆ. ಈ ಸಿನಿಮಾದ ಶೂಟಿಂಗ್ ಆಗಸ್ಟ್ 8ರಂದು ಆರಂಭ ಆಗಲಿದೆ ಎಂದು ವರದಿ ಆಗಿದೆ. ಅದಕ್ಕೂ ಮೊದಲು ಯಶ್ ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಅಷ್ಟೇ ಅಲ್ಲ, ಅಲ್ಲಿ ಪ್ರಸಾದ ರೂಪದಲ್ಲಿ ನೀಡುವ ಊಟವನ್ನು ಮಾಡಿ ಬಂದಿದ್ದಾರೆ. ಸಿನಿಮಾ ಕೆಲಸಗಳು ಆರಂಭ ಆಗುವ ಸನಿಹದಲ್ಲಿ ಇರುವ ಕಾರಣದಿಂದಲೇ ಯಶ್ ಅವರು ಅಲ್ಲಿಗೆ ತೆರಳಿದ್ದಾರೆ ಎಂದು ವರದಿ ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296