ಬೆಳಗಾವಿ: ದಕ್ಷಿಣ ಭಾಗದಲ್ಲಿ ಮತಪ್ರಚಾರ ಜೋರಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾವತಿ ಮಾಸ್ತಮರಡಿ ಮಜಗಾವಿಯಲ್ಲಿ ಇಂದು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಥಳೀಯರನ್ನು ಉದ್ದೇಶಿಸಿ ಮತ ನೀಡುವಂತೆ ಮನವಿ ಮಾಡಿದರು.
ಭಾಗವಹಿಸಿದ್ದ ಹಿರಿಯರು, ಯುವಕರೆಲ್ಲರೂ ಹಾಲಿ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದು, ಮೊದಲಿನಂತೆ ಜನಪರ ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ.
ಎಲ್ಲೇ ಹೋದರೂ ಜನರು ಕುಡಿಯುವ ನೀರು, ಚರಂಡಿ ಅವ್ಯವಸ್ಥೆ, ಬೆಲೆ ಏರಿಕೆ ಮುಂತಾದವುಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಕಾಂಗ್ರೆಸ್ ಸರ್ಕಾರ ಮಾತ್ರ ಅದನ್ನು ಪರಿಹರಿಸಬಹುದು, ಹಾಗಾಗಿ ಈ ಬಾರಿ ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ನಿರ್ಧಾರ ಮಾಡಿರುವುದಾಗಿ ತಿಳಿಸಿದರು.
ಕಾಂಗ್ರೆಸ್‌ನ ಜನಪರ ಆಡಳಿತ, 5 ಗ್ಯಾರಂಟಿಗಳು, ಬೆಳಗಾವಿ ದಕ್ಷಿಣಕ್ಕೆ ಯೋಜನೆ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


