ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಬೆಳಗಾವಿಯಿಂದ ಕಷ್ಟ ಪರಿಸ್ಥಿತಿಯಲ್ಲಿರುವ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಗೆ ಕ್ರೀಡಾ ಮಾಶಾಸನ ಮಂಜೂರಾತಿಗಾಗಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದ ಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ 50 ವರ್ಷ ಮೇಲ್ಟಟ್ಟ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿಅರ್ಜಿಯನ್ನು ಉಪ ನಿರ್ದೇಶಕರಕಚೇರಿ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಜಿಲ್ಲಾಕ್ರೀಡಾಂಗಣ, ಬೆಳಗಾವಿ ಇವರಲ್ಲಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ. 8660184052 ಅಥವಾ 0831-2950306 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


