ಅನಾರೋಗ್ಯದಿಂದ ಬಳಲುತ್ತಿದ್ಧಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಬ್ಬಾರ್ ಖಾನ್ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಕರ್ತವ್ಯ ನಿರ್ವಹಿಸಿದ್ದರು. ಜಬ್ಬಾರ್ ಖಾನ್ ಹೊನ್ನಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy