ಕಾರವಾರ: ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಶಿಕ್ಷಣ ಸಚಿವ ಪ್ರಭಾಕರ್ ರಾಣೆ ಅವರು, ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
1983ರಿಂದ ಮೂರು ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಪ್ರಭಾಕರ್ ರಾಣೆ, ಕಾರವಾರ-ಜೊಯಿಡಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1993ರಲ್ಲಿ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶಿಕ್ಷಣ ಸಚಿವರಾಗಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy