ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ.
ಸಾಲದ ರೂಪದಲ್ಲಿ 1.3 ಕೋಟಿ ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಅದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಇದೀಗ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದೂರು ನೀಡಿದ್ದಾರೆ.
ಇನ್ನು ಕಿಂಗ್ಸ್ ಕೋರ್ಟ್ ಎಲ್ ವಿವೇಕಾನಂದರಿಂದ 1.3 ಕೋಟಿ ರೂ. ಚೆಕ್ ಮೂಲಕ ಹಣ ಪಡೆದಿರುವುದನ್ನ ಎನ್ ಆರ್ ರಮೇಶ್ ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಟರ್ಫ್ ಕ್ಲಬ್ ಉತ್ಸುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ನೇಮಕವಾಗಿದರು.
3 ವರ್ಷದ ಅವಧಿಗೆ ನೇಮಕಮಾಡಿ ಆದೇಶವನ್ನ ಸಿದ್ದರಾಮಯ್ಯ ಮಾಡಿದರು. ಲೋಕಾಯುಕ್ತ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ವಿವೇಕ್ ರಿಂದ ಸಾಲ ಪಡೆದಿದ್ದಾಗಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy