ಕಲಬುರಗಿ : ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದ್ದು, ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಹಿಳೆಯರಿಗೆ ಜನರು ಥಳಿಸಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ.
ತೆಲಂಗಾಣದ ಕೊತ್ಲಾಪುರದಿಂದ ಇಬ್ಬರು ಮಹಿಳೆಯರು ಪೋಲಕಪಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಿ ಅನುಮಾನಿಸಿದ ಜನರು ಮಕ್ಕಳ ಕಳ್ಳರೆಂದು ಭಾವಿಸಿ ಥಳಿಸಿದ್ದಾರೆ.
ಮಹಿಳೆಯರನ್ನು ಥಳಿಸಿದ ಗ್ರಾಮಸ್ಥರು ಬಳಿಕ ಮಹಿಳೆಯರನ್ನು ಚಿಂಚೋಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ಪೊಲೀಸರು ಮಹಿಳೆಯರು ಸಂಬಂಧಿಕರ ಮನೆಗೆ ಬಂದಿರುವುದು ಎಂದು ತಿಳಿದುಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy