ಸಿರಾ: ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಕಾಳಜಿ ಶಿಕ್ಷಕರಿಗೂ ಇರುತ್ತದೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ವರಲಕ್ಷ್ಮೀ ರಾಜಣ್ಣ ಹೇಳಿದರು.
ತಾಲ್ಲೂಕಿನ ಹೊಸಬಿಜ್ಜನಬೆಳ್ಳ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕ ರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು.
ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಿ ಆರ್ ಪಿ ಕರುಣಾಕರ್ , ಈ ಹಿಂದೆ ಮುಖ್ಯ ಶಿಕ್ಷಕರಾಗಿದ್ದ ಟಿ.ಜಿ ಗಂಗಪ್ಪ ಜಯಣ್ಣ, ಆಲಿ ಮುಖ್ಯ ಶಿಕ್ಷಕರಾದ ಬಿ.ಆರ್. ರಂಗನಾಥ, ಶಿಕ್ಷಕಿಯಾದ ಗಿರಿಜಾ ಟಿ, ಎಸ್ ಡಿ ಎಮ್ ಸಿ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ರಂಗಮ್ಮ, ಗ್ರಾಮದ ಪಟೇಲರಾದ ಜಯಣ್ಣ ಹಾಗೂ ಹಳೇ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಸದಸ್ಯರು ಹಾಜರಿದ್ದರು.
ವರದಿ : ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB