ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಮ್ಯಾಂಡಾಸ್ ಚಂಡಮಾರುತದಿಂದಾಗಿ ನೆರೆಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಇದರ ಎಫೆಕ್ಟ್ ಕರ್ನಾಟಕದ ಮೇಲೂ ತಟ್ಟಿದೆ. ಈ ಹಿನ್ನೆಯಲ್ಲಿ ಮಳೆ, ಶೀತಗಾಳಿ ಹೆಚ್ಚಾಗಿದ್ದು ಮಕ್ಕಳು, ವೃದ್ಧರು ತುಂಬಾ ಎಚ್ಚರಿಕೆಯಿಂದಿರುವಂತೆ ಆರೋಗ್ಯ ಸಚಿವ ಸುಧಾಕರ್ ಸಲಹೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಚಳಿಗಾಲದ ಜೊತೆ ಚಂಡಮಾರುತದ ಪರಿಣಾಮ ಎದುರಿಸುತ್ತಿದ್ದೇವೆ. ಹೀಗಾಗಿ ಮಕ್ಕಳು, ವೃದ್ಧರು ತುಂಬಾ ಎಚ್ಚರಿಕೆಯಿಂದ ಇರಬೇಕು. ವೃದ್ಧರನ್ನ, ಮಕ್ಕಳನ್ನ ತುಂಬಾ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದಲೂ ಮಾರ್ಗಸೂಚಿ ಹೊರಡಿಸಿದ್ದೇವೆ. ವೈದ್ಯರಿಗೂ ಎಚ್ಚರಿಕೆ ವಹಿಸಲು ಸಭೆ ಕರೆದು ಸೂಚಿಸುತ್ತೇನೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೂ ಮುಂಜಾಗ್ರತಾ ಕ್ರಮ ವಹಿಸಲು ಈಗಾಗಲೇ ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಎಲ್ಲಾ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಈಗ ಸಭೆ ಕರೆದು ವೈದ್ಯರಿಗೂ ಸೂಚನೆ ಕೊಡುತ್ತೇನೆ. ಈ ವಾತಾವರಣದಿಂದ ಕೊರೋನಾ ಉಲ್ಬಣವಾಗುವುದಿಲ್ಲ. ಆದರೆ ದೇಹವನ್ನು ತುಂಬಾ ಬೆಚ್ಚಗೆ ಕಾಪಾಡಿಕೊಳ್ಳಬೇಕು.ನಾವೂ ಕೂಡ ತುಂಬಾ ಮುಂಜಾಗ್ರತೆವಹಿಸಿದ್ದೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy