ಮಧುಗಿರಿ: ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕೆಂದು ಪೋಷಕರಿಗೆ ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ಸಿ.ಎ.ಎನ್.ಮಧು ಜಿ.ಡಿ.ಪಾಳ್ಯ ಕರೆ ನೀಡಿದರು.
ತಾಲ್ಲೂಕಿನ ಕಸಬಾ ಹೋಬಳಿ ಕಂಬತ್ತನಹಳ್ಳಿ ಗ್ರಾಮದಲ್ಲಿ ಲಕ್ಷ್ಮೀದೇವಸ್ಥಾನದ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಧು ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಅವಶ್ಯಕವಾದ ಹಾಸ್ಟೆಲ್ ಸೌಲಭ್ಯ, ನೋಟ್ ಬುಕ್ ಸೇರಿದಂತೆ ಶೈಕ್ಷಣಿಕ ಮೂಲಭೂತ ಸೌಲಭ್ಯಗಳ ನಿವಾರಣೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಟ್ರಸ್ಟ್ ಆದ್ಯತೆ ನೀಡುತ್ತದೆ. ಗ್ರಾಮದ ಮುಖಂಡರುಗಳು ಟ್ರಸ್ಟ್ ಗೆ ಸದಸ್ಯರಾಗುವ ಮೂಲಕ ತಮ್ಮ ಗ್ರಾಮಗಳ ಸಮಸ್ಯೆಗಳ ನಿವಾರಣೆಗೆ ಟ್ರಸ್ಟ್ ಜೊತೆಗೆ ಕೈ ಜೋಡಿಸುವಂತೆ ಮನವಿ ಮಾಡಿದರು. ಜೊತೆಗೆ ತಾಲ್ಲೂಕಿನ ಜನತೆಯ ಅನುಕೂಲಕ್ಕಾಗಿ ಶೀಘ್ರದಲ್ಲೇ ಟ್ರಸ್ಟ್ ಕಚೇರಿಯನ್ನು ಪಟ್ಟಣದಲ್ಲಿ ಪ್ರಾರಂಭಿಸಲಾವುದು. ತಾಲ್ಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಇದೇ ವೇಳೆ ಮನವಿ ಮಾಡಿಕೊಂಡರು.
ಟ್ರಸ್ಟ್ ಮೂಲಕ ಸಾಮಾನ್ಯ ಜನತೆಗೆ ಸರ್ಕಾರದ ಯೋಜನೆಗಳು ಮತ್ತು ಸರ್ಕಾರದ ಸಲವತ್ತುಗಳನ್ನು ತಲುಪಿಸಲು ಕ್ರಮ ವಹಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಲಕ್ಷ್ಮೀದೇವಸ್ಥಾನದ ಪದಾಧಿಕಾರಿಗಳು, ಗ್ರಾಮದ ಹಿರಿಯ ಮುಖಂಡರುಗಳು, ಗ್ರಾಮಸ್ಥರು ಹಾಜರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700