nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳೇಕೆ ಹೀಗೆ?… | ಕೃಷ್ಣಮೂರ್ತಿ ಕೆ.ಕೆ.
    ಲೇಖನ November 20, 2022

    ಮಕ್ಕಳೇಕೆ ಹೀಗೆ?… | ಕೃಷ್ಣಮೂರ್ತಿ ಕೆ.ಕೆ.

    By adminNovember 20, 2022No Comments4 Mins Read
    krishnamorthy kk

    ಇಂದಿನ ಪತ್ರಿಕೆ ತಿರುವುತ್ತಿದ್ದೆ. ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಾರಣ ಪರೀಕ್ಷೆಯಲ್ಲಿ ಚೀಟಿ ಇಟ್ಟಿದ್ದಳೆಂದು ಕ್ಲಾಸ್ ಟೀಚರ್ ಬೈದಿದ್ದರು. ಅವಮಾನ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡಿದ್ದಳು. ಪೋಷಕರು ಮತ್ತು ಊರವರು ಶಾಲೆಯ ಮುಂದೆ ವಿದ್ಯಾರ್ಥಿನಿಯ ಶವ ಇಟ್ಟು ಧರಣಿ ಕೂತಿದ್ದರು. ಅವರ ಬೇಡಿಕೆ ಸ್ಪಷ್ಟ “ಹುಡುಗಿಯ ಸಾವಿಗೆ ಟೀಚರೇ ಕಾರಣ, ಅವರನ್ನು ನಮ್ಮ ಕೈಗೆ ಕೊಡಿ” ಬಹುಶಃ ಕೈಗೆ ಸಿಕ್ಕರೆ ಮಗುವಿನೊಂದಿಗೆ ಟೀಚರನ್ನೂ ಸಮಾಧಿ ಮಾಡುವ ಯೋಚನೆ ಇರಬಹುದು. ಸ್ವಲ್ಪ ದಿನದ ಮುಂಚೆ ಇದೇ ರೀತಿಯ ಪ್ರಸಂಗ ನಡೆದಿತ್ತು. ಪರೀಕ್ಷೆಯಲ್ಲಿ ಚೀಟಿ ಇಟ್ಟು ಸಿಕ್ಕಿಬಿದ್ದ ಹುಡುಗನೊಬ್ಬನನ್ನು ಶಿಕ್ಷಕಿ ಹೊರಗೆ ನಿಲ್ಲುವಂತೆ ಸೂಚಿಸಿದ್ದರು. ಹುಡುಗ ನೇರ ಅಪಾರ್ಟ್ ಮೆಂಟ್ ಗೆ ತೆರಳಿ, ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದ. ಕಾರಣ ಆತನಿಗೆ ಅದು ಸಹಿಸಲಾರದ ಅವಮಾನವಾಗಿತ್ತು. ಪೋಷಕರು ರೊಚ್ಚಿಗೆದ್ದು ಶಿಕ್ಷಕಿ ಮೇಲೆ ಕೇಸು ದಾಖಲಿಸಿದ್ದರು. ಈ ಎರಡೂ ಪ್ರಕರಣದಲ್ಲಿ ವಿದ್ಯಾರ್ಥಿಗಳು ಹತ್ತನೇ ತರಗತಿ ಕಲಿಯುತ್ತಿದ್ದರು.

    ಈ ಮೇಲಿನ ಎರಡು ಘಟನೆಗಳಲ್ಲದೆ ಇನ್ನೂ ನೂರಾರು ಘಟನೆಗಳು ನಮ್ಮ ಮುಂದಿವೆ. ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಅಪ್ಪ ಬೈದ ಕಾರಣಕ್ಕಾಗಿ ಅವಮಾನಗೊಂಡು ಆತ್ಮಹತ್ಯೆ ಮಾಡಿಕೊಂಡದ್ದು ಅದರಲ್ಲೊಂದು. ಅಮ್ಮ ಮೊಬೈಲ್ ಮುಟ್ಟಬೇಡ, ಓದು ಎಂದು ಹೇಳಿದ ತಕ್ಷಣ ಮಗಳು ಮೊಬೈಲ್ ಬದಿಗಿಟ್ಟು, ಮೈಕೊಡವಿ ರೂಮಿನೊಳಗೆ ತೆರಳುತ್ತಾಳೆ. ಬಹಳ ಹೊತ್ತು ಹೊರಗೆ ಬರದಿದ್ದಾಗ, ಬಾಗಿಲು ತೆಗೆದು ಒಳಗಡೆ ನೋಡಿದರೆ ಮಗಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಧಿಕೃತ ವರದಿಯ ಪ್ರಕಾರ ಪ್ರತಿ 55 ನಿಮಿಷಕ್ಕೆ ಒಬ್ಬರು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಹತ್ಯೆ ಪ್ರಕರಣ ಕಳೆದವರ್ಷ ಶೇಕಡಾ 7 ರಷ್ಟು ಹೆಚ್ಚಾಗಿರುವುದು ಪ್ರಜ್ಞಾವಂತ ಸಮಾಜವನ್ನು ಕಳವಳಕ್ಕೀಡು ಮಾಡಿದೆ.


    Provided by
    Provided by

    ಅಭಿಮನ್ಯು ತನ್ನ ಹದಿಮೂರನೇ ವಯಸ್ಸಿನಲ್ಲಿ ಚಕ್ರವ್ಯೂಹಕ್ಕೆ ನುಗ್ಗಿದ ಬಗ್ಗೆ ಓದಿದ್ದೇವೆ. ಚಿಕ್ಕ ವಯಸ್ಸಿನಲ್ಲೇ ಆತನಲ್ಲಿ ಅಷ್ಟೊಂದು ಪ್ರಬುದ್ಧತೆ ಇತ್ತು. ರಾಮ ಲಕ್ಷ್ಮಣರು ವಿದ್ಯೆ ಅರಸಿ ಅರಮನೆ ತೊರೆದು ಕಾಡಿಗೆ ಹೋಗುವಾಗ ಇನ್ನೂ ಚಿಕ್ಕ ವಯಸ್ಸಿನವರೇ ಆಗಿದ್ದರು. ಅಷ್ಟೇಕೆ ಖ್ಯಾತ ವಿಜ್ಞಾನಿ ಐನ್ ಸ್ಟೈನ್ ತನ್ನ ಹದಿನೈದನೇ ವಯಸ್ಸಿಗೆ ಪ್ರಸಿದ್ಧಿ ಪಡೆದಿದ್ದ. ಇನ್ನು ಸ್ವಾತಂತ್ರ್ಯ ಹೋರಾಟವನ್ನೇ ಗಮನಿಸಿದರೂ ಹದಿಹರೆಯದ ಅದೆಷ್ಟೋ ಹೋರಾಟಗಾರರು ನಮ್ಮ ಚರಿತ್ರೆಯ ಪುಟ ತುಂಬಿದ್ದಾರೆ. ಹಾಗಾದರೆ ಈಗಿನ ಮಕ್ಕಳ ಅವಸ್ಥೆಗೆ ಕಾರಣವೇನು ಎಂದು ಯೋಚಿಸುವ ಪ್ರಯತ್ನ ಮಾಡಬೇಡವೇ?
    ಹಿಂದೆ ನಾವು ಶಾಲೆಗೆ ಹೋಗುತ್ತಿದ್ದ ಕಾಲ ನೆನಪಾಗುತ್ತಿದೆ. ಸ್ವಲ್ಪ ಎಡವಟ್ಟಾದರೂ ಬಾಸುಂಡೆ ಬರುವಂತೆ ಮನೆಯಲ್ಲಿ ಅಪ್ಪನ ಪೆಟ್ಟು. ಕಡೆಗೆ ರಾತ್ರಿ ಅಮ್ಮ ಅಪ್ಪನಿಗೆ ಕದ್ದು ಎಣ್ಣೆ ಹಚ್ಚಿದ್ದೂ ಇದೆ. ಶಾಲೆಗೆ ಹೋದರೆ ಮೇಸ್ಟ್ರ ಭಯ. ಸ್ವಲ್ಪ ತಪ್ಪಾದರೂ ಬೀಳುತ್ತಿದ್ದ ಛಡಿಯೇಟು. ಮನೆಗೆ ದೂರು ತಂದರೆ ಮನೆಯಲ್ಲಿ ಮತ್ತೆ ಪೆಟ್ಟು. ಹಾಗಾಗಿ ಶಾಲೆಯ ವಿಚಾರ ಮನೆಗೆ ಬರುತ್ತಾನೇ ಇರಲಿಲ್ಲ. ಕೆಲವೊಮ್ಮೆ ಮಕ್ಕಳನ್ನು ಹೆದರಿಸಲು, “ನಿನ್ನ ಮೇಸ್ಟರಿಗೆ ಹೇಳುತ್ತೇನೆ” ಎಂದು ಹೆದರಿಸಿ ಬಾಯಿಮುಚ್ಚಿಸಿದ್ದೂ ಇದೆ. ಆಶ್ಚರ್ಯವೆಂದರೆ ಅಂತಹ ಪರಿಸ್ಥಿತಿಯಲ್ಲೇ ಬೆಳೆದುಬಂದ ಅನೇಕ ಮಹಾನೀಯರು ನಮ್ಮ ಮುಂದಿದ್ದಾರೆ.ವಿಶ್ವೇಶ್ವರಯ್ಯ, ಸಿ.ವಿ.ರಾಮನ್, ಗಾಂಧೀಜಿ,ಅಬ್ದುಲ್ ಕಲಾಂ…ಹೀಗೇ. ಇವರೆಲ್ಲಾ ಹಿಂದಿನ ಪದ್ಧತಿಯಲ್ಲೇ ಬೆಳೆದು ಖ್ಯಾತಿಪಡೆದವರು.

    ಇತ್ತೀಚೆಗೆ ಮಕ್ಕಳ ಮೇಲಿನ ಮಮತೆ ಬಹಳನೇ ಅತಿರೇಖವಾಗಿದೆ. ಮಕ್ಕಳು ಕೇಳಿದರೆ ಚಂದ್ರನನ್ನೂ ತರಲು ಚಂದ್ರಯಾನಕ್ಕೂ ತಯಾರಿದ್ದೇವೆ. ಬಾಯಿಬಾರದ ಮಗು ಅತ್ತಾಗ ಮೊಬೈಲ್ ಕೈಗಿಟ್ಟು ಸಮಾಧಾನ ಪಡಿಸಲಾಗುತ್ತಿದೆ. ಮನೆಯಲ್ಲಿರುವ ನಾಲ್ಕು ಮಂದಿ ನಾಲ್ಕು ದಿಕ್ಕಿಗೆ ಮುಖಹಾಕಿ ಮೊಬೈಲ್ ನಲ್ಲಿ ಬ್ಯುಸಿಯಾಗಿರುವ ಚಿತ್ರಣ ಬಹುತೇಕ ಮನೆಯದ್ದು. ಮನೆಯ ಯಾವ ಕೆಲಸವೂ ಮಕ್ಕಳಲ್ಲಿ ಮಾಡಿಸಲಾರೆವು. ಏಕೆಂದರೆ ಅವರು ಓದಬೇಕು. ಪದವಿ ಪಡೆದ ಮಗಳಿಗೆ ಚಾಹುಡಿ ಮತ್ತು ಸಾಸಿವೆ ಇಲ್ಲವೇ ಸಕ್ಕರೆ ಮತ್ತು ಉಪ್ಪಿನ ನಡುವಿನ ವ್ಯತ್ಯಾಸ ಗೊತ್ತಿಲ್ಲವಾಗಿದೆ.Platform hero ಗಳಾದ ನಮ್ಮ ಮಕ್ಕಳು practically Zero ಗಳಾಗುತ್ತಿದ್ದಾರೆ. Mentally strong ಆಗಬೇಕಿತ್ತು, ಆದರೆ strongly mental ಆಗುತ್ತಿದ್ದಾರೆ ಎಂದರೆ ತಪ್ಪಾಗದು.
    ಇವತ್ತು ಮಕ್ಕಳಲ್ಲಿ ತರಗತಿ ಕೋಣೆ ಗುಡಿಸಲು ಹೇಳಿದರೆ ಅಪರಾಧ, ಕಸ ಹೆಕ್ಕಿಸಿದರೆ ಅಪರಾಧ, ಶುಚಿಗೊಳಿಸಿದರೆ ಅಪರಾಧ…..ಹೀಗೇ ಅಪರಾಧಗಳ ಪಟ್ಟಿಯೇ ಬೆಳೆಯುತ್ತದೆ. ಹಾಗಾದರೆ ಮಕ್ಕಳಲ್ಲಿ ಮಾಡಿಸೋ ಕೆಲಸ ಯಾವುದು?…. ಇಂದಿನ ಪರಿಸ್ಥಿತಿ ಅವಲೋಕಿಸಿದರೆ ಅತ್ಯಂತ ಕ್ಲಿಷ್ಟಕರವಾದ ವೃತ್ತಿಯೆಂದರೆ ಶಿಕ್ಷಕ ವೃತ್ತಿಯಾಗಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಡಿಯಿಂದ ಮುಡಿಯವರೆಗೆ ಅವ್ಯವಹಾರ,ನಕಲು ನಡೆಯಲು ಕಾರಣವೇನು?…. ಅದು ಶಾಲೆಯ ಪರೀಕ್ಷೆಯಲ್ಲಿ ಚೀಟಿ ಇಟ್ಟು ಬರೆದ ಪ್ರತಿಫಲನವಾಗಿರಬಹುದಲ್ಲವೇ?… ಪರೀಕ್ಷೆಯಲ್ಲಿ ಚೀಟಿ ಇಟ್ಟರೂ ಶಿಕ್ಷಕರು ಮೌನವಾಗಿರಬೇಕೆಂದು ಸಮಾಜದ ನಿರೀಕ್ಷೆಯೇ?….ಹಾಗಾದರೆ ಪರೀಕ್ಷೆಯೆಂಬ ನಾಟಕವೇಕೆ?…. ಹೋಮ್ ವರ್ಕ್ ಕೊಡದಿದ್ದರೆ ಮೇಲಧಿಕಾರಿಯಿಂದ ತರಾಟೆ. ಹೋಂ ವರ್ಕ್ ಮಾಡಿದ ಬಗ್ಗೆ ವಿಚಾರಿಸಿದರೆ ಮಕ್ಕಳಿಗೆ ಅವಮಾನ. ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದರೆ ಶಿಕ್ಷಕರು ಅಪರಾಧಿಗಳು, ಮಾರ್ಕ್ ಹೆಚ್ಚು ಬರಲು ಪ್ರಯತ್ನಿಸಿದರೆ ಮಕ್ಕಳಿಗೆ ಒತ್ತಡ…..ಹೀಗೇ ಮಕ್ಕಳಿಗೆ ರಕ್ಷಣೆ ನೀಡುವ ವಿಪರೀತ ಪ್ರಯತ್ನ ಮಕ್ಕಳ ಒತ್ತಡ ನಿರೋಧಕ ಶಕ್ತಿಯನ್ನೇ ಕಸಿದುಕೊಂಡಿಲ್ಲವೇ?..

    ನನ್ನಮ್ಮ ಅಮ್ಮನಿಗೆ ಹದಿನಾಲ್ಕರ ಹರೆಯದಲ್ಲಿ ಮದುವೆ. ಅತ್ತೆಗೆ ಹನ್ನೆರಡರಲ್ಲೇ ಮದುವೆಯಂತೆ. ಆದರೆ ಅವರು ಸುದೀರ್ಘ ಅವಧಿ ಒಟ್ಟಾಗಿ, ಒಂದಾಗಿ ಅದೆಷ್ಟು ಸುಂದರವಾಗಿ ಬದುಕಿದರು. ಆದರೆ ಪ್ರಬುದ್ಧ ವಯಸ್ಸು ಬಂದು ವಿವಾಹವಾದ ಯುವಕ ಯುವತಿಯರು ವರ್ಷ ಪೂರ್ತಿಯಾಗುವ ಮುಂಚೆ ಡೈವೋರ್ಸ್ ಗಾಗಿ ಅಲೆದಾಡುತ್ತಿಲ್ಲವೇ?…. ಹಾಗಂತ ವಯಸ್ಸಿಗಿಂತ ವಯಸ್ಸನ್ನು ಮಾಗಿಸುವ ವಿಧಾನ ಬದಲಾಗಬೇಕಿದೆ. ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವ ಮನೋಸ್ಥಿತಿ ಬೆಳೆಸಬೇಕಿದೆ.

    ಮಕ್ಕಳಲ್ಲಿ ನಿದ್ರಾಹೀನತೆ ಇಂದು ಅಸಹಿಷ್ಣುತೆಗೆ ಬಹುಮುಖ್ಯ ಕಾರಣಗಳಲ್ಲಿ ಒಂದು. ಖಿನ್ನತೆ, ಅತಿಯಾದ ಮೊಬೈಲ್ ಬಳಕೆಗಳಲ್ಲದೆ ಮಾದಕ ವಸ್ತುಗಳು ಮಕ್ಕಳ ಮನಸ್ಸನ್ನು ಕದಡುತ್ತಿದೆ. ಇಂದು ಶಿಕ್ಷಕರು ಅಸಹಾಯಕರಾಗಿದ್ದಾರೆಂದರೆ ತಪ್ಪಾಗದು. ಮಕ್ಕಳನ್ನು ಯಾವ ಬಗೆಯಲ್ಲಿ ನಿರ್ವಹಿಸಬೇಕೆಂಬುವುದೇ ಯಕ್ಷಪ್ರಶ್ನೆ. ಹೇಗಿರಬೇಕೆಂದು ಹೇಳುವುದಕ್ಕೂ, ಅದನ್ನು ಕಾರ್ಯರೂಪಕ್ಕೆ ತರುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

    ತರಗತಿಯಲ್ಲಿ ಮಕ್ಕಳನ್ನು ವಿಚಾರಿಸಿದಾಗ ನಾಲ್ಕು ಮಂದಿಯಲ್ಲಿ ಮೊಬೈಲ್ ಪತ್ತೆಯಾಯಿತು. ಮೊಬೈಲ್ ತೆಗೆದು ಒಳಗಿಟ್ಟೆವು. ಆದರೆ ರಾತ್ರಿಪೂರ್ತಿ ನಿದ್ರೆಯಿಲ್ಲ. ಮಕ್ಕಳು ಏನಾದರೂ ಅನಾಹುತ ಮಾಡಿಕೊಂಡರೆ..! . ಮರುದಿನ ಗೌರವದಿಂದ ಅವುಗಳನ್ನು ಕೊಟ್ಟು ಕಳಿಸಿದೆವು. ಏಕೆಂದರೆ ನಾವು ಬದುಕಬೇಕಿತ್ತು. ಇಂತಹದ್ದೇ ಇನ್ನೊಂದು ಪ್ರಸಂಗ ನೆನಪಾಗುತ್ತಿದೆ. ಹುಡುಗನೊಬ್ಬ ಶಾಲೆಗೆ ಆಗಾಗ ತಪ್ಪಿಸುತ್ತಿದ್ದ. ಪೋಷಕರ ಗಮನಕ್ಕೆ ತಂದಿದ್ದೆ. ಅಂದು ಆತ ಶಾಲೆಗೆ ಬಂದಿರಲಿಲ್ಲ. ಸಂಜೆ ಅಪ್ಪನಿಂದ ಪೋನಲ್ಲಿ ಮಗನ ಬಗ್ಗೆ ವಿಚಾರಿಸಿದರು. ಮಗ ಶಾಲೆಗೆ ಬಂದಿಲ್ಲ ಅಂದೆ. ಆಗ ಮೊಬೈಲ್ ಮಗನ ಕೈಗೆ ಕೊಟ್ಟರು. ” ಸರ್, ನೀವ್ಯಾಕೆ ಸುಳ್ಳು ಹೇಳೋದು, ನಾನು ಕ್ಲಾಸಲ್ಲೇ ಕುಳಿತಿದ್ದೆ. ನೀವೇ ಇವತ್ತು ಶಾಲೆಗೆ ಬಂದಿಲ್ಲ.” ಅನ್ನಬೇಕೆ. ನನಗೆ ಶಾಕ್. “ಎಲ್ಲಿ ಮಾರೆಯಾ, ನಾನು ಎಂಟುಗಂಟೆಗೆ ಶಾಲೆಯಲ್ಲಿದ್ದೆ. ನಿನ್ನ ಕ್ಲಾಸಿಗೆ ಎರಡು ಅವಧಿ ಪಾಠ ಮಾಡಿದ್ದೆ” ಅಂದಾಗ “ಸರ್,ನೀವು ಈ ರೀತಿ ಸುಳ್ಳು ಯಾಕೆ ಹೇಳುತ್ತೀರಿ? ಮಾಸ್ಟ್ರಾಗಿ ನೀವು ಸುಳ್ಳು ಹೇಳಬಹುದಾ?” ಎಂದು ಕೇಳಿದಾಗ ನಾನು ತತ್ತರಿಸಿದ್ದೆ. ಕರೆ ಕಟ್ ಮಾಡಿ ಒಂದಿಬ್ಬರು ವಿದ್ಯಾರ್ಥಿಗಳಲ್ಲಿ ವಿಚಾರಿಸಿದೆ. ಶಿಕ್ಷಕರಲ್ಲೂ ವಿಚಾರಿಸಿದೆ. ಆತ ಶಾಲೆಗೆ ಬಂದಿಲ್ಲ ಎಂಬುವುದನ್ನು ದೃಢಪಡಿಸಿದೆ. ಮತ್ತೆ ಕಾಲ್ ಮಾಡಿದೆ.ತೆಗೆದದ್ದು ಅಪ್ಪ.ಅಪ್ಪನಿಗೆ ನನ್ನ ಮಾತಲ್ಲಿ ನಂಬಿಕೆ ಬರಲೇ ಇಲ್ಲ. “ನನ್ನ ಮಗ ಯಾಕೆ ಸುಳ್ಳು ಹೇಳುತ್ತಾನೆ?” ಎಂದು ನನ್ನನ್ನೇ ಪ್ರಶ್ನಿಸಬೇಕೇ?….ಇಂತಹದ್ದೇ ಇನ್ನೊಂದು ಪ್ರಸಂಗದಲ್ಲಿ ವಿದ್ಯಾರ್ಥಿನಿಯ ತಾಯಿಯೊಬ್ಬಳು ” ನನ್ನ ಮಗಳು ಈ ತನಕ ಸುಳ್ಳು ಹೇಳಿಲ್ಲ, ಇನ್ನೂ ಹೇಳಲ್ಲ” ಎಂದು ನನ್ನ ಮೇಲೆ ರೇಗಿದ್ದಳು.

    ನಾವೆಲ್ಲಾ ಈ ನಿಟ್ಟಿನಲ್ಲಿ ಮತ್ತೊಮ್ಮೆ ಯೋಚಿಸುವ ಅಗತ್ಯವಿದೆ. ಇಲ್ಲವಾದಲ್ಲಿ ಕೆಲವೇ ವರ್ಷಗಳಲ್ಲಿ ತೀರಾ ಹದಗೆಟ್ಟ ಪರಿಸ್ಥಿತಿ ನಮ್ಮದಾಗಬಹುದು. ಸರಿಪಡಿಸಲಾರದ ಸ್ಥಿತಿಗೆ ತಲುಪಿದಾದ ಪಶ್ಚತ್ತಾಪವೊಂದೇ ನಮ್ಮ ಮುಂದೆ ಉಳಿದ ದಾರಿಯಾಗಬಹುದು……

    ಬರಹಗಾರು: ಕೃಷ್ಣಮೂರ್ತಿ ಕೆ.ಕೆ.
    ಹಿಂದಿ ಶಿಕ್ಷಕರು, ವರಿನ್ ಅಂತರಾಷ್ಟ್ರೀಯ ವಸತಿ ಶಾಲೆ,
    ತುಮಕೂರು.


    ಪ್ರತಿಕ್ರಿಯೆ:

    ●ತಮ್ಮ ಲೇಖನ ಹೀಗೆ ಮುಂದುವರೆಯಲಿ ಸರ್… ದೇವರು ತಮಗೆ ಇನ್ನೂ ಹೆಚ್ಚಿನ ಲೇಖನ ಬರೆಯುವ ಶಕ್ತಿ ಕೊಡುವುದರ ಜೊತೆಗೆ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತಾ ಶುಭ ಕೋರುತ್ತಿದ್ದೇನೆ.

    ಯತೀಶ್ ಕುಮಾರ್ (ಚಿತ್ರಕಲಾ ಶಿಕ್ಷಕರು)
    ರಾಜ್ಯ ಮಟ್ಟದ “ಶಿಕ್ಷಕ ರತ್ನ” ಪ್ರಶಸ್ತಿ ಪುರಸ್ಕೃತರು,
    ಮತ್ತು ಪ್ರಧಾನ ಕಾರ್ಯದರ್ಶಿ, ಸರ್ಕಾರಿ ಚಿತ್ರಕಲಾ ಮಹಾ ವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ (ರಿ.,)
    ತುಮಕೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    ಒಮ್ಮೆ ನಮ್ಮ ಮುಂದಿನ ಭವಿಷ್ಯ ನೋಡುವ ಬನ್ನಿ…?

    October 24, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.