ಪಾವಗಡ: ಹೆಲ್ಪ್ ಸೊಸೈಟಿ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ದಿನ್ನಪ್ಪನಬಾವಿ ತಾಂಡಾ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಉಚಿತ ನೋಟ್ ಪುಸ್ತಕಗಳು ಹಾಗೂ ಅಂಗನವಾಡಿ ಕೇಂದ್ರಕ್ಕೆ ಟೇಬಲ್ ಹಾಗೂ ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು.
ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಕಲಿಕಾ ಸಾಮಗ್ರಿ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಹೆಲ್ಪ್ ಸೊಸೈಟಿಯ ಪದಾಧಿಕಾರಿಗಳಾದ ವೆಂಕಟೇಶ್ ನಾಯ್ಕ, ಗೌತಮ್, ಸಾಯಿ ಕುಮಾರ್, ಶ್ರೀಕಾಂತ್, ನರೇಶ್ ಹಾಗೂ ಎಸ್ ಡಿಎಂಸಿ ಉಪಾಧ್ಯಕ್ಷರಾದ ಶಂಕರ್ ನಾಯ್ಕ, ಸಮಾಜಸೇವಕರಾದ ಪ್ರಕಾಶ್, ಮುಖ್ಯಶಿಕ್ಷಕ ಗಂಗಾಧರ್, ಸಹ ಶಿಕ್ಷಕ ಶಾರದಮ್ಮ, ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಉಪಸ್ಥಿತರಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB