ಸರಗೂರು: ಇಂದು ತಾಲ್ಲೂಕಿನ ಜೆ.ಎಸ್.ಎಸ್. ಪ್ರೌಢಶಾಲೆಯಲ್ಲಿ 15ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕಾಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ತಾಲೂಕು ತಹಶೀಲ್ದಾರ್ ಚಲುವರಾಜು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಸರಗೂರು ತಾಲೂಕಿನ ವ್ಯಾಪ್ತಿಯಲ್ಲಿರುವ 15 ರಿಂದ 18 ವರ್ಷದ ಸುಮಾರು 2,450 ಮಕ್ಕಳಿಗೆ, 7 ರಿಂದ 10 ದಿನಗಳೊಳಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದ್ದೇವೆ ಎಂದರು.
ಜನವರಿ 3 ರಿಂದ ರಾಜ್ಯಾದ್ಯಂತ 15 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ಹಾಕಲಾಗುವುದು. ತಾಲೂಕಿನಲ್ಲಿ ಇಂದು 15 ರಿಂದ 18 ವರ್ಷದ ಹತ್ತನೇ ತರಗತಿ, ಪ್ರಥಮ ಪಿ.ಯು.ಸಿ. ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.
ತಾಲೂಕಿನ ಸಾಗರೆ, ಬಡಗಲಪುರ, ಮನುಗನಹಳ್ಳಿ ಹಾಗೂ ಶಾಂತಿಪುರ ಗ್ರಾಮಗಳಲ್ಲಿ ಲಸಿಕಾ ಹಾಕಲಾಗುತ್ತಿದೆ. ಲಸಿಕೆ ತೆಗೆದುಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳೂ ಇರುವುದಿಲ್ಲ ಆದುದರಿಂದ ಎಲ್ಲಾ ಮಕ್ಕಳು ಲಸಿಕೆಯನ್ನೂ ತಪ್ಪದೇ ಹಾಕಿಸಿಕೊಳ್ಳಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಪಾರ್ಥಸಾರಥಿ ಹಾಗೂ ಇನ್ನಿತರರು ಇದ್ದರು.
ವರದಿ: ಚಂದ್ರಹಾದನೂರು ಸರಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy