ತಿಪಟೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ದಿನ “ಮಕ್ಕಳು ಎದುರುಸುತ್ತಿರುವ ಪ್ರಚಲಿತ ಸಮಸ್ಯೆಗಳು” ಕುರಿತು ಸಂವಾದ ಕಾರ್ಯಕ್ರಮ ತಿಪಟೂರಿನ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಜೆ ರಾಮಮೋಹನ್ ಅಧ್ಯಕ್ಷರು, ನಗರಸಭೆ ತಿಪಟೂರು ಇವರು ನೆರವೇರಿಸಿದರು. ಪ್ರಾಂಶುಪಾಲ ಪರಶಿವಮೂರ್ತಿ, ಉಪ ಪ್ರಾಂಶುಪಾಲ ಚನ್ನೆಗೌಡ ಉಪಸ್ಥಿತರಿದ್ದರು
ಬಿ.ಎಸ್. ನಂದಕುಮಾರ್ ಮಕ್ಕಳ ಕಲ್ಯಾಣ ಸಮಿತಿ ತುಮಕೂರು ಇವರು ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಕು.ರಶ್ಮೀ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತುಮಕೂರು, ದೈಹಿಕ ಶಿಕ್ಷಣಾಧಿಕಾರಿ ಶಮಂತ, ನಗರಸಭೆ ಆರೋಗ್ಯ ನಿರೀಕ್ಷಕ ಶ್ರೀನಿವಾಸ್ , ಎ.ಎಸ್.ಐ. ಶಂಕರಪ್ಪ, ಶಿಕ್ಷಕರಾದ ಮಧು ಹಾಜರಿದ್ದರು. ವಿವಿಧ ಪ್ರೌಢಶಾಲೆಯ 70ಕ್ಕೂ ಹೆಚ್ಚು ಮಕ್ಕಳು ಸಂವಾದ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.ಸಹ ಶಿಕ್ಷಕ ಸಂತೋಷಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5