ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮುಧೋಳ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದ (PHC) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ರೋಗದ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಯಿತು. ರೋಗ ಹರಡುವಿಕೆ, ಅದರ ಪ್ರಮುಖ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಪರಿಸರ ಸ್ವಚ್ಛತೆಯ ಮಹತ್ವದ ಕುರಿತು ಆರೋಗ್ಯ ಇಲಾಖೆಯ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಮಳೆಗಾಲದಲ್ಲಿ ಎಲ್ಲೂ ನೀರು ನಿಂತುಕೊಳ್ಳದಂತೆ ಜಾಗ್ರತೆ ವಹಿಸುವುದು, ಸೊಳ್ಳೆ ಕಡಿತದಿಂದ ಸ್ವತಃ ರಕ್ಷಿಸಿಕೊಳ್ಳುವುದು ಹಾಗೂ ವೈಯಕ್ತಿಕ ಮತ್ತು ಸುತ್ತಮುತ್ತಲಿನ ಆರೋಗ್ಯದ ಬಗ್ಗೆ ಸದಾ ಎಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಈ ಜಾಗೃತಿ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಸಿಎಚ್‌ಒ ಕೌಶಿಕ ಕೇದಾರೆ, ಎಚ್‌ಐಒ ನಾಗನಾಥ ಕುಂಬರ್, ಆಶಾ ಕಾರ್ಯಕರ್ತೆಯರಾದ ಮಹಾದೇವಿ ಹಾಗೂ ಸುಲಾಖಾ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




