ಕೊಡಗು: ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದಿನ ತಡೆಗೋಡೆ ಕುಸಿತ ನೋಡಲು ತೆರಳಿದ್ದ ಅವರಲ್ಲಿ ಸ್ಥಳೀಯರು ವಾಹನ ಸಂಚಾರ ನಿಷೇಧಿಸದೆ ದುರಸ್ತಿ ಕಾರ್ಯ ನಡೆಸುವಂತೆ ಮನವಿ ಮಾಡಿದರು.
ಮಡಿಕೇರಿ ಒಂದು ಕಿ.ಮೀ ದೂರವಷ್ಟೆ ಇದೆ. ಆದರೆ ವಾಹನ ಸಂಚಾರ ನಿಷೇಧಿಸಿರುವುದರಿಂದ 10 ಕಿ.ಮೀ ದೂರ ಪ್ರಯಾಣ ಮಾಡಬೇಕಿದೆ ಎಂದು ಅಳಲು ತೋಡಿಕೊಂಡರು.
ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಮಳೆಯಿಂದ ಗುಡ್ಡದ ಒಂದು ಪಾರ್ಶ್ವ ಕುಸಿದಿದ್ದ ಮದೆನಾಡಿಗೂ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz