ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಾಚರಣೆಯಿಂದ ರಕ್ಷಣೆ ಮಾಡಲಾಗಿದೆ.
ಬಿ.ಹೆಚ್.ರಸ್ತೆಯಲ್ಲಿರುವ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಆಟದ ಮೈದಾನದಲ್ಲಿ ಸುಮಾರು 20/15 ಅಡಿ ಆಳ ಅಗಲವುಳ್ಳ ಮಳೆನೀರು ಇಂಗುವ ಕಟ್ಟೆಯನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ ರಾತ್ರಿಯಲ್ಲಿ ಆ ಕಟ್ಟೆಯೊಳಗೆ ಎರಡು ನಾಯಿಗಳು ಬಿದ್ದಿದ್ದು, ಕಟ್ಟೆಯಿಂದ ಹೊರ ಬರಲಾಗದೇ ಕಟ್ಟೆಯಲ್ಲೇ ಸಿಲುಕಿಕೊಂಡಿದ್ದವು.
ಇಂದು ಬೆಳಗ್ಗೆ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಸಿಬ್ಬಂದಿ ನಾಯಿಗಳನ್ನು ನೋಡಿದ್ದು, ನಾಯಿಗಳನ್ನು ಮೇಲೆತ್ತಲು ಕಾಲೇಜಿನ ಸಿಬ್ಬಂದಿ ಹರಸಾಹದಪಟ್ಟಿದ್ದು, ಆದರೆ ನಾಯಿಗಳನ್ನು ಹೊರ ತೆಗೆಯಲು ಸಾಧ್ಯವಾಗಿಲ್ಲ.
ಇದೇ ವೇಳೆ ಕಾಲೇಜಿನ ಸಿಬ್ಬಂದಿ ವರ್ಗದವರಾದ ಮಾಚನಹಳ್ಳಿ ಮುನಿರಾಜು ಅವರಿಗೆ ಈ ವಿಚಾರ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬಳಿಕ ಸಂಬಂಧ ಪಟ್ಟ ಮಹಾನಗರ ಪಾಲಿಕೆ ಹಾಗೂ ಆ ಭಾಗದ ಸ್ಥಳಿಯ ಕಾರ್ಪೋರೇಟರ್ ರವರಿಗೆ ವಿಷಯ ಮುಟ್ಟಿಸಿದ್ದಾರೆ. ಆದರೆ ಅವರು ಇಲ್ಲದ ನೆಪಗಳನ್ನು ಹೇಳಿ ಸರಿಯಾಗಿ ಸ್ಪಂದಿಸಲಿಲ್ಲ. ಹೀಗಾಗಿ ಖುದ್ದಾಗಿ ಅಗ್ನಿಶಾಮಕ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಎರಡೂ ನಾಯಿಗಳನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ.
ಅಗ್ನಿಶಾಮಕ ದಳದ ಅಧಿಕಾರಿಗಳಾದ ಅಡವಿಶ್ ಅವರ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆಯ ಮೂಲಕ ಎರಡೂ ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ಮೂಕ ಪ್ರಾಣಿಗಳ ಮೇಲೆ ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳವು ಮಾನವೀಯತೆ ಮೆರೆದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1