ಬೆಂಗಳೂರು: 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರವಾಗಿ ರಾಜ್ಯ ಸರ್ಕಾರ 124 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಕಂದಾಯ ಇಲಾಖೆ ಮೂಲಕ ಜಿಲ್ಲಾಧಿಕಾರಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಹೀಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


