ಕುಣಿಗಲ್: ಪಟ್ಟಣದ ಕಿರಿಯ ಶ್ರೇಣಿಯ ನ್ಯಾಯಾಲಯ ಕಟ್ಟಡ ಮಳೆಯಿಂದಾಗಿ ಸೋರುತ್ತಿದ್ದು, ನ್ಯಾಯಾಧೀಶರು, ವಕೀಲರು ಕಕ್ಷಿದಾರರ ಹಿತದೃಷ್ಟಿಯಿಂದ ಶುಕ್ರವಾರದಿಂದ ಕಲಾಪ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ವಕೀಲರ ಸಂಘದ ಅಧ್ಯಕ್ಷ ಹುಚ್ಚೇಗೌಡ ಈ ಸಂಬಂಧ ಮಾಹಿತಿ ನೀಡಿ, ನ್ಯಾಯಾಲಯದ ಕಟ್ಟಡ ಸೋರುತ್ತಿರುವುದರಿಂದ ಮಳೆ ನೀರಿನಿಂದಾಗಿ ದಾಖಲೆಗಳು ನೆನೆಯುತ್ತಿವೆ. ಸದಾ ನೀರು ಜಿನುಗುತ್ತಿದ್ದು ಯಾರು ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಟ್ಟಡ ಶಿಥಲವಾಗಿರುವುದರಿಂದ ತಾರಸಿಯಲ್ಲಿ ಬಿರುಕು ಕಾಣಿಸಿಕೊಂಡು ಉದುರುತ್ತಿದೆ. ಇದನ್ನು ತಡೆಯಲು ತಾತ್ಕಾಲಿಕವಾಗಿ ಜಾಲರಿ ನಿರ್ಮಿಸಿದ್ದರೂ, ಪ್ರಯೋಜನವಾಗಿಲ್ಲ ಎಂದರು.
ಈ ಬಗ್ಗೆ ಸಂಬಂಧ ಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬುಧವಾರ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳ ನಿಯೋಗದಿಂದ ಹೈಕೋರ್ಟ್ ನ್ಯಾಯಾಧೀಶರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700