ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಮನೆಗಳಿಗೂ ನೀರು ನುಗ್ಗಿದ್ದು, ಜನ ಬಿಬಿಎಂಪಿಯನ್ನು ಶಪಿಸುತ್ತಾ ನಿದ್ರೆಗೆಟ್ಟು ರಾತ್ರಿಯಿಡಿ ನೀರನ್ನು ಹೊರ ಹಾಕುವ ಕಾರ್ಯದಲ್ಲಿ ತೊಡಗಿದ್ದರು.
ರಾತ್ರಿ 11:00 ರ ಸುಮಾರಿಗೆ ಮಳೆ ಸುರಿದಿದ್ದು, ಒಟ್ಟಾರೆ 22.39 ಮಿಲಿಮೀಟರ್ ಮಳೆಯಾಗಿದೆ ಎಂದು ತಿಳಿದು ಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಅತಿ ಹೆಚ್ಚು ಅಂದರೆ 65 ಮಿಲಿ ಮೀಟರ್ ಮಳೆಯಾಗಿದೆ.
ಇನ್ನುಳಿದಂತೆ ಬಿಬಿಎಂಪಿ ವ್ಯಾಪ್ತಿಯ ಪೂರ್ವ ವಿಭಾಗದಲ್ಲಿ 61.50 ಮಿಲಿಮೀಟರ್, ದಕ್ಷಿಣ ವಿಭಾಗದಲ್ಲಿ 59.50 ಮಿಲಿ ಮೀಟರ್, ಬೊಮ್ಮನಹಳ್ಳಿ 53 ಮಿಲಿ ಮೀಟರ್ ಮತ್ತು ಪಶ್ಚಿಮ ವಿಭಾಗದಲ್ಲಿ 44.50 ಮಿಲಿಮೀಟರ್ ಮಳೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz