nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು

    September 24, 2026

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    • ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    • ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಲೆಮಹದೇಶ್ವರ ಬೆಟ್ಟಕ್ಕೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ
    ರಾಜ್ಯ ಸುದ್ದಿ September 3, 2022

    ಮಲೆಮಹದೇಶ್ವರ ಬೆಟ್ಟಕ್ಕೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

    By adminSeptember 3, 2022No Comments2 Mins Read
    malemahadeshwara

    ಮಲೆಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ತೆರಳುತ್ತಿದ್ದ 6 ಚಕ್ರಕ್ಕಿಂತ ಅಧಿಕ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ದಿಂಬಂ ಘಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನೀಷೇಧ ಇರುವುದರಿಂದ ತಮಿಳುನಾಡಿಗೆ ಸರಕು ಸಾಗಿಸುವ ಲಾರಿಗಳೆಲ್ಲಾ ಮಲೆಮಹದೇಶ್ವರ ಬೆಟ್ಟದ ಮೂಲಕ ನೆರೆ ರಾಜ್ಯಕ್ಕೆ ತಲುಪುತ್ತಿದ್ದವು. ಆದರೆ, ಬೆಟ್ಟದ ರಸ್ತೆ ಕಿರಿದು ಹಾಗೂ ಕಡಿದಾದ ಹಿನ್ನೆಲೆಯಲ್ಲಿ ಆಗಾಗ್ಗೆ ಲಾರಿಗಳು ಪಲ್ಟಿಯಾಗಿ ಗಂಟೆಗಟ್ಟಲೇ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಡಿಸಿ ಚಾರುಲತಾ ಸೋಮಲ್ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

    ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದು 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಾತ್ರ ನಿರ್ಬಂಧಿಸಲಾಗಿದೆ. ಆದರೆ ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್ ವಾಹನ, ಸರ್ಕಾರಿ, ಖಾಸಗಿ ಬಸ್‍ಗಳು, ಸರ್ಕಾರಿ ವಾಹನಗಳು 24 ತಾಸು ಕೂಡ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.

    ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಈ ಕಾರಣದಿಂದ ರಾತ್ರಿ ವೇಳೆಯಲ್ಲಿ ಎಲ್ಲಾ ಮಾದರಿಯ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್ ಮೂಲಕ ಸಾಗುವ ಅಂತಾರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿವೆ. ಇದರಿಂದ ಮಹದೇಶ್ವರ ಬೆಟ್ಟದ ರಸ್ತೆಗಳು ಸಂಪೂರ್ಣ ಹಾಳಾಗಿದ್ದವು. ಅಲ್ಲದೆ ರಸ್ತೆಯು ಕಡಿದಾದ ತಿರುವಿನಿಂದ ಕೂಡಿದ್ದು ಆಗಾಗ್ಗೆ ಪಲ್ಟಿಯಾಗಿ ಎಡವಟ್ಟು ಸೃಷ್ಟಿಯಾಗುತ್ತಿತ್ತು.

    ತಿಂಗಳಲ್ಲೇ ಎರಡು ಮೂರು ಬಾರಿ ಅಪಘಾತ ಸಂಭವಿಸಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಸಮಸ್ಯೆಯನ್ನುಂಟು ಮಾಡಿತ್ತು.
    ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988ರ ಸೆಕ್ಷನ್ 115, ಕರ್ನಾಟಕ ಮೊಟಾರು ವಾಹನಗಳ ನಿಯಾಮಾವಳಿ-1989ರ ನಿಯಮ 221-ಎ(5)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ 1960ರ ಸೆಕ್ಷನ್ 3ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

    ಜೊತೆಗೆ 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

    ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೂಚನೆ ಮೇರೆಗೆ ಈ ಆದೇಶ ಹೊರಬಿದ್ದಿದ್ದು ಮಾದಪ್ಪನ ಭಕ್ತರಿಗೆ ರಿಲೀಫ್ ಸಿಕ್ಕಿದೆ‌. ರಸ್ತೆ ಹಾಳಾಗುವುದು ತಪ್ಪಿದಂತಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು

    September 24, 2026

    ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

    September 24, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು

    September 24, 2026

    ಬೆಂಗಳೂರು: ಆರ್ಥಿಕ ಇಲಾಖೆಯು ಸರ್ಕಾರಕ್ಕೆ ನೀಡುವುದು ಸಾಮಾನ್ಯ ಸಲಹೆಯಾಗಿದ್ದು, ಇದು ರಾಜಕೀಯ ಮಾಡುವಂತಹ ದೊಡ್ಡ ವಿಷಯವಲ್ಲ. ಬಿಜೆಪಿ ಹಾಗೂ ಜೆಡಿಎಸ್‌ನವರು…

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

    September 24, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.