ಕೊರಟಗೆರೆ: ಮಾಜಿ ಉಪ ಮುಖ್ಯಮಂತ್ರಿ, ಶಾಸಕ, ಹಿರಿಯ ಕಾಂಗ್ರೆಸ್ ನಾಯಕರಾದ ಡಾ.ಜಿ.ಪರಮೇಶ್ವರ್ ಅವರು ಸ್ಥಳೀಯ ರೈತರು ಹಾಗೂ ಜನಪ್ರತಿನಿಧಿಗಳ ಜೊತೆಗೂಡಿ ಇಂದು ಗಂಗಾ ಮಾತೆಗೆ ಬಾಗಿನ ಅರ್ಪಿಸಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬೆಳಧರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊಲ್ಲಹಳ್ಳಿ ಕೆರೆಯ ಗಂಗಾಮಾತೆಗೆ ಬಾಗಿನ ಅರ್ಪಿಸಿದ ಜಿ.ಪರಮೇಶ್ವರ್, ಇದೇ ವೇಳೆ ಗಂಗಾ ಮಾತೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಾಗಿನ ಅರ್ಪಿಸಲು ಆಗಮಿಸಿದ್ದ ಸಂದರ್ಭದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದರೂ, ಜಿ.ಪರಮೇಶ್ವರ್ ಅವರು ಮಳೆಯ ನಡುವೆಯೂ ಸ್ಥಳೀಯ ರೈತರು ಹಾಗೂ ಜನಪ್ರತಿನಿಧಿಗಳ ಜೊತೆಗೂಡಿ ಬಾಗಿನ ಅರ್ಪಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700