ತುಮಕೂರು: ರಾಜ್ಯಾದ್ಯಂತ ಮಳೆಯಿಂದ ನಾನಾ ಸಂಕಷ್ಟಗಳಾಗಿವೆ. ಇದೇ ಸಂದರ್ಭದಲ್ಲಿ ತುಮಕೂರಿನಲ್ಲೂ ಮಳೆ ನಿರಂತರವಾಗಿ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ಧೈರ್ಯ ಹೇಳಬೇಕಾದ ಜಿಲ್ಲಾ ಉಸ್ತುವಾರಿ ಸಚಿವರ ಪತ್ತೆಯೇ ಇಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂರು ದಿನಗಳಿಂದ ನಿರಂತರ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದರೆ, ಇತ್ತ ತುಮಕೂರಿಗೆ ಉಸ್ತುವಾರಿ ಸಚಿವರು ಇದ್ದೂ ಇಲ್ಲದಂತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.
ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಈವರೆಗೂ ಜಿಲ್ಲೆಗೆ ಭೇಟಿ ನೀಡಿಲ್ಲ. ಅಧಿಕಾರಿಗಳ ಸಭೆ ನಡೆಸಿ ಮಳೆ ಪರಿಸ್ಥತಿ ನಿರ್ವಹಣೆಗೆ ಸೂಚನೆ ನೀಡಿಲ್ಲ ಎನ್ನುವುದು ಜಿಲ್ಲಾ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5