ತಿಪಟೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವುಳ್ಳ ಫೋಟೋವನ್ನು ತೆಗೆದು ಅವಮಾನಿಸಿದ, ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವಜಾ ಮಾಡುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ರವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಫೋಟೋವನ್ನು ತೆಗೆದು ಅವಮಾನಿಸಿದ ನ್ಯಾಯಾಧೀಶರ ನಡೆಯನ್ನು ಖಂಡಿಸಿ, ನ್ಯಾಯಾಧೀಶ ಸ್ಥಾನದಿಂದ ಅವರನ್ನು ವಜಾ ಮಾಡಿ, ರಾಷ್ಟ್ರದ್ರೋಹ ಪ್ರಕರಣದಡಿಯಲ್ಲಿ ಕೇಸು ದಾಖಲಿಸಿ, ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಿಪಟೂರು ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್. ಪರಮೇಶ್ವರಯ್ಯ ರವರ ಮುಖಾಂತರ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು..
ಎಪಿಎಂಸಿ ಸದಸ್ಯ ಬಜಗೂರು ಮಂಜುನಾಥ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ. ಬಸವರಾಜ್ ಮತ್ತು ಕರವೇ ನಗರ ಅಧ್ಯಕ್ಷ ವೈ.ವಿ.ವೆಂಕಟೇಶ್ ಮಾತನಾಡಿದರು. ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ಕಾರ್ಯದರ್ಶಿ ಹಿಂಡಿಸ್ಕೆರೆ ರವಿಕುಮಾರ್, ನಗರ ಕಾರ್ಯದರ್ಶಿ ಲೋಕೇಶ್, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಫೈರೋಜ್, ಪ್ರಧಾನ ಕಾರ್ಯದರ್ಶಿ ಶಾಬುದ್ದೀನ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಉಮಾಶಂಕರ್, ಸಂಘಟನೆಯ ಪದಾಧಿಕಾರಿಗಳಾದ ಕುಮಾರ್ ಮತ್ತು ಸುಧೀಂದ್ರ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy