ಹಿರಿಯೂರು: ಅಂಬೇಡ್ಕರ್ ಫೋಟೋ ತೆರವುಗೊಳಿಸಿ ಅವಮಾನಿಸಿದ ರಾಯಚೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಲ್ಲಿಕಾರ್ಜುನ ಗೌಡ ಮೇಲೆ ರಾಷ್ಟ್ರ ದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ, ಭಾರತೀಯ ದಲಿತ ಸಂಘರ್ಷ ಸಮಿತಿ ಹಿರಿಯೂರು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿತು.
ಜನವರಿ 26 ರಂದು ಗಣರಾಜ್ಯೋತ್ಸವದ ದಿನ ರಾಯಚೂರು ಕೋರ್ಟ್ ಆವರಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವಕ್ಕೆ ರಾಯಚೂರು ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಲ್ಲಿಕಾರ್ಜುನ ಗೌಡ ( ಲಿಂಗಾಯಿತ ಗೌಡ ) ರವರು ತಮ್ಮ ವೃತ್ತಿ ಗೌರವಕ್ಕೆ ಅವಮಾನ ಮಾಡಿದ್ದಲ್ಲದೆ, ಸಂವಿಧಾನ ಕ್ಕೆ ಮತ್ತು ಭಾರತ ರತ್ನ ಮಹಾನಾಯಕ ಬಾಬಾ ಸಾಹೇಬ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣವೇ ನ್ಯಾಯಾಧೀಶರ ವಿರುದ್ಧ ಸೂಕ್ತ ಶಿಸ್ತು ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಸಂಘಟನೆಯ ಮುಖಂಡರು, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿ ಕಾರ್ಜುನ ಗೌಡ ವಿರುದ್ಧ ಕ್ರಮಕೈಗೊಳ್ಳದಿದ್ದರೆ, ಆಹೋರಾತ್ರಿ , ಧರಣಿ ಸತ್ಯಾಗ್ರಹವನ್ನು ಕೈಗೊಳ್ಳುವುದಾಗಿ ಇದೇ ವೇಳೆ ಭಾರತೀಯ ದಲಿತ ಸಂಘರ್ಷ ಸಮಿತಿ ಮುಖಂಡರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಧ್ಯಕ್ಷರಾದ ತಿಮ್ಮರಾಜು. ಕೆ , ರಾಜ್ಯ ಉಪಾಧ್ಯಕ್ಷರಾದ ಚಂದ್ರಪ್ಪ ಘಾಟ್, ರಾಜ್ಯ ಕಾರ್ಯದರ್ಶಿ ವೆಂಕಟೇಶ್, ರಾಜ್ಯ ನಿರ್ದೇಶಕರು ನಂದಕುಮಾರ್ , ರಾಜ್ಯ ಯುವ ಘಟಕದ ಅಧ್ಯಕ್ಷರಾದ ಎಂ ಡಿ ರಮೇಶ್ ಕುಮಾರ್ , ಜಿಲ್ಲಾ ಉಪಾಧ್ಯಕ್ಷರಾದ ಕರ್ಣಕುಮಾರ್ , ಜಿಲ್ಲಾ ಉಪಾಧ್ಯಕ್ಷರಾದ ಮೋಹನ್ ಕುಮಾರ್ ( ಹಿಂಡಸಕಟ್ಟೆ ) , ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ್ ( ಆಟೋ ) , ತಾಲ್ಲೂಕು ಕಾರ್ಯದ್ಯಕ್ಷರಾದ ಮಾರುತಿ, ಹಿಂದುಳಿದ ವರ್ಗಗಳ ತಾಲ್ಲೂಕು ಅಧ್ಯಕ್ಷರಾದ ಮಂಜುನಾಥ್, ದಲಿತ ಮುಖಂಡರಾದ ಹನುಮಂಯಭೋವಿ, ದಲಿತ ಮುಖಂಡರಾದ ರಮೇಶ . ಪಿ , ದಲಿತ ಮುಖಂಡರಾದ ಸಿದ್ದೇಶ್ ಎನ್. ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy