ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣಾ ಕಾರ್ಯಪಡೆ ಸಭೆ ಸೋಮವಾರ ನಡೆಯಲಿದೆ.
ಎಐಸಿಸಿ ಅಧ್ಯಕ್ಷರಾದ ನಂತರ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಕಾರ್ಯಾಪಡೆ ಸಭೆ ಸೇರಲಿದ್ದು, ಮುಂಬರುವ 2024 ಚುನಾವಣೆಗೆ ಪಕ್ಷದ ಕಾರ್ಯನೀತಿ ಕುರಿತು ಚರ್ಚೆ ನಡೆಸಲಿದೆ.
ಕಾರ್ಯಪಡೆಯ ಕಾಂಗ್ರೆಸ್ ಹಿರಿಯ ಮುಖಂಡರಾದ ಪಿ.ಚಿದರಂಬರಂ, ಮುಕುಲ್ ವಾಸ್ನಿಕ್, ಜೈರೂಮ್ ರಮೇಶ್, ಕೆಸಿ ವೇಣುಗೋಪಾಲ್, ಅಜಯ್ ಮಾಕೇನ್, ರಣದೀಪ್ ಸುರ್ಜೆವಾಲಾ, ಪ್ರಿಯಾಂಕಾ ಗಾಂಧಿ, ಸುನೀಲ್ ಕಾನುಗೊಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜಸ್ಥಾನದ ಉದಯ್ ಪುರದಲ್ಲಿ ಕಾಂಗ್ರೆಸ್ ಚಿಂತನ್ ಶಿಬಿರ ಏಪ್ರಿಲ್ ನಲ್ಲಿ ನಡೆದಿತ್ತು. ನಂತರ ಎಐಸಿಸಿ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಸಭೆ ನಡೆದಿರಲಿಲ್ಲ. ಇದೀಗ ಖರ್ಗೆ ಅಧಿಕಾರಕ್ಕೆ ಬಂದ ನಂತರ ಮೊದಲ ಸಭೆ ಸೋಮವಾರ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy