ನವದೆಹಲಿ: ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು, ನಿಮ್ಮಿಂದ ರಾಜತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗುತ್ತಿದ್ದಂತೆ, ಈ 40 ಅಸೆಂಬ್ಲಿ ಸ್ಥಾನಗಳಲ್ಲಿ ಜನರು ತಮ ಪ್ರಜಾಸತ್ತಾತಕ ಹಕ್ಕುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಲಾಯಿಸಲು ನಾನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಜನರಿಂದ ರಾಜ್ಯತ್ವವನ್ನು ಕಿತ್ತುಕೊಂಡವರಿಗೆ ಪಾಠ ಕಲಿಸಲು ಇದು ಅಂತಿಮ ಅವಕಾಶವಾಗಿದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296