ಬೆಂಗಳೂರು: ಯುವ ಕಾಂಗ್ರೆಸ್ ನಾಯಕಿಯೊಬ್ಬರಿಗೆ ವ್ಯಕ್ತಿಯೊಬ್ಬ ಅಶ್ಲೀಲ ಸನ್ನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ 43 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ನಿವಾಸಿ ಹರ್ಷ ಎಚ್.ಬಿ. ಬಂಧಿತ ಆರೋಪಿಯಾಗಿದ್ದಾನೆ. ಮೈಸೂರು-ಬೆಂಗಳೂರು ರಸ್ತೆಯ ಗೋಪಾಲನ್ ಮಾಲ್ ಬಳಿ ಈ ಘಟನೆ ಬುಧವಾರ ನಡೆದಿತ್ತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮತ್ತು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಮಾಧ್ಯಮ ಪ್ಯಾನೆಲಿಸ್ಟ್ ಅಕ್ಷತಾ ರವಿಕುಮಾರ್ ಅವರು ತಮಗೆ ಅಶ್ಲೀಲ ಸಿಂಬಲ್ ತೋರಿಸಿದ ವ್ಯಕ್ತಿಯ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿದ್ದರು.
ಈ ವಿಡಿಯೋ ಆಧರಿಸಿ ದೂರು ದಾಖಲಿಸಿಕೊಂಡಿದ್ದ ಚಾಮರಾಜಪೇಟೆ ಪೊಲೀಸರು, ಇಂದು ಆರೋಪಿಯನ್ನು ಬಂಧಿಸಿದ್ದಾರೆ.
ಹಾರ್ನ್ ಮಾಡಿದ ವಿಚಾರಕ್ಕೆ ನಡುವೆ ಮಾತಿನ ಚಕಮಕಿ ನಡೆಸಿತು. ಅವರು ಕೃತ್ಯದ ವಿಡಿಯೋವನ್ನು ಸಹ ರೆಕಾರ್ಡ್ ಮಾಡಿದ್ದಾರೆ. ಘಟನೆಯ ಸಮಯದಲ್ಲಿ ಆ ವ್ಯಕ್ತಿ ತನ್ನ ಕುಟುಂಬದೊಂದಿಗೆ ಇದ್ದರು. ಈ ಘಟನೆಯು ತಪ್ಪು ತಿಳುವಳಿಕೆಯಿಂದ ಉಂಟಾಗಿದೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 79 ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಮತ್ತು ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ನಂತರ ಆರೋಪಿಯನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4