ಲಕ್ನೋ: ಹಿಂದೂ ಎಂದು ನಂಬಿಸಿ ಅನೇಕ ಹಿಂದೂ ಯುವತಿಯರನ್ನು ವಿವಾಹವಾಗಿದ್ದ ಶರಾಫ್ ರಿಜ್ವಿ ಎಂಬ ಮುಸ್ಲಿಂ ವ್ಯಕ್ತಿಯನ್ನು ಸಾರನಾಥ ಪೊಲೀಸರು ಫರೂಕಾಬಾದ್ ನಿಂದ ಬಂಧಿಸಿದ್ದಾರೆ.
ಸಾರಾನಾಥದ ಮಹಿಳೆಯೊಬ್ಬರು ದೂರು ನೀಡಿದ ಬಳಿಕ ರಿಜ್ವಿ ಸಿಕ್ಕಿಬಿದ್ದಿದ್ದಾನೆ. ಈತ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ. ರೂ.5 ಲಕ್ಷ ಸುಲಿಗೆ ಮಾಡಿದ್ದು, ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹಾಕುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಗುರುತಿನ ಮೂಲಕ ಉತ್ತರ ಪ್ರದೇಶ ಸೇರಿದಂತೆ ಮೂರು ರಾಜ್ಯಗಳಲ್ಲಿ ಕನಿಷ್ಠ 12 ಯುವತಿಯರನ್ನು ವಿವಾಹವಾಗಿರುವುದಾಗಿ ರಿಜ್ವಿ ವಿಚಾರಣೆಯ ಸಮಯದಲ್ಲಿ ಒಪ್ಪಿಕೊಂಡಿದ್ದಾನೆ ಎಂದು ಸಾರನಾಥ ಪೊಲೀಸರು ತಿಳಿಸಿದ್ದಾರೆ.
ಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ರಿಜ್ವಿ, ಹಣ ಮತ್ತು ಉಡುಗೊರೆಗಳನ್ನು ಸುಲಿಗೆ ಮಾಡುತ್ತಿದ್ದ. ದೈಹಿಕ ಸಂಬಂಧ ಹೊಂದಿದ್ದ ನಂತರ ತನ್ನ ನೈಜ ಗುರುತನ್ನು ಬಹಿರಂಗಪಡಿಸುತ್ತಿದ್ದ. ಆಗಾಗ್ಗೆ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC