ಮಹಿಳೆ ಸ್ನಾನ ಮಾಡುತ್ತಿದ್ದವೇಳೆ ಕೊಠಡಿಯ ಕಿಟಕಿಯಲ್ಲಿ ಇಣುಕಿ ನೋಡಿದ್ದ ಆರೋಪದಡಿ ನಿತಿನ್ನನ್ನು (23) ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಮುನ್ನೇಕೊಳಲು ಮಂಜುನಾಥ್ನಗರದ ನಿವಾಸಿ ನಿತಿನ್, ಫಾರ್ಮಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಮಹಿಳೆ ಹಾಗೂ ಅವರ ಪತಿ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಮಹಿಳೆ ವಾಸವಿರುವ ಮನೆಯ ಪಕ್ಕದಲ್ಲಿರುವ ಬಾಡಿಗೆ ಮನೆಯಲ್ಲಿ ನಿತಿನ್ ನೆಲೆಸಿದ್ದ ಮಹಿಳೆ ಶನಿವಾರ ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಆರೋಪಿ, ಗೋಡೆ ಪಕ್ಕದಲ್ಲಿ ನಿಂತು ಕಿಟಕಿ ಮೂಲಕ, ಮಹಿಳೆ ಸ್ನಾನ ಮಾಡುತ್ತಿರುವುದನ್ನು ನೋಡುತ್ತಿದ್ದ. ಆರೋಪಿಯನ್ನು ನೋಡಿದ್ದ ಸ್ಥಳೀಯರೊಬ್ಬರು ಹಿಡಿಯಲು ಹೋಗಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದ್ದ ಯುವಕನನ್ನು ಸ್ಥಳೀಯರು ಬೆನ್ನಟ್ಟಿ ಹಿಡಿದಿದ್ದರು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಹೋಗಿ ನಿತಿನ್ನನ್ನು ವಶಕ್ಕೆ ಪಡೆದರು.ಠಾಣೆಗೆ ಕರೆತಂದು ವಿಚಾರಿಸಿದಾಗ ತಪ್ರೊಪ್ಪಿಕೊಂಡ’ ಎಂದು ಪೊಲೀಸರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


