ಹುಬ್ಬಳ್ಳಿ: ಪತ್ನಿ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
ಪೀಟರ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿರುವ ಪೀಟರ್ ಹೆಂಡತಿ ಟಾರ್ಚರ್ ನಿಂದ ನಾನು ಸಾಯುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಅಲ್ಲದೇ ತನ್ನ ಶವ ಪೆಟ್ಟಿಗೆಯಲ್ಲಿ ಹೆಂಡತಿ ಕಾಟ ತಾಳಲಾರದೆ ಸತ್ತನು ಎಂದು ಬರೆಯಲು ಡೆತ್ ನೋಟ್ ನಲ್ಲಿ ತಿಳಿಸಿದ್ದು, ಅಂತೆಯೇ ಕುಟುಂಬಸ್ಥರು ಶವ ಪೆಟ್ಟಿಗೆಯಲ್ಲಿ ಬರೆಸಿದ್ದಾರೆ.
ಪೀಟರ್ ಹಾಗೂ ಪತ್ನಿ ಪಿಂಕಿ ದೂರವಾಗಿದ್ದರು. ಇವರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು ಎನ್ನಲಾಗಿದೆ. ಪತ್ನಿ ಪಿಂಕಿ ವಿಚ್ಛೇದನಕ್ಕೆ 20 ಲಕ್ಷ ರೂಪಾಯಿ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx