ಹಾಸನ: ಸಂತೆಯಿಂದ ಮನೆಯ ಕಡೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೇಲೂರಿನ ಯಗಚಿ ಸೇತುವೆ ಬಳಿ ನಡೆದಿದೆ.
ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ಆನಂದ್ (52) ಮೃತ ದುದೈವಿ ಎಂದು ಗುರುತಿಸಲಾಗಿದೆ. ಅವರು ಟ್ರ್ಯಾಕ್ಟರ್‌ನಲ್ಲಿ ಉಳುಮೆ ಮಾಡಿ ಬೇಲೂರು ಸಂತೆಗೆ ಬಂದಿದ್ದರು. ಸಂತೆಯಲ್ಲಿ ತರಕಾರಿ, ದಿನಸಿ ಖರೀದಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಯಗಚಿ ಸೇತುವೆ ಬಳಿ ದಿಢೀರ್ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯರು ಬೇಲೂರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


