ಸಿರಾ: ಸಿರಾ ಅಮರಾಪುರ ಯಮ ಸ್ವರೂಪಿ ಗುಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಟ್ರ್ಯಾಕ್ಟರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಶಿರಾ– ಅಮರಾಪುರ ರಸ್ತೆಯ ಉಗಣೆಕಟ್ಟೆ ಬಳಿ ನಡೆದಿದೆ.
ರಾಗಲ ಹಳ್ಳಿಯ ನರಸಿಂಹಮೂರ್ತಿ ಮೃತಪಟ್ಟವರಾಗಿದ್ದಾರೆ. ಯಮ ಸ್ವರೂಪಿ ಗುಂಡಿ ರಸ್ತೆ ಗುಂಡಿಗಳನ್ನು ತಪ್ಪಿಸಿಕೊಂಡು ಟ್ರ್ಯಾಕ್ಟರ್ ಸಾಗುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ನರಸಿಂಹಮೂರ್ತಿ ಆಯತಪ್ಪಿ ಕೆಳಗೆ ಬಿದ್ದಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ.
ತಕ್ಷಣ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಇಸ್ಮಾಯಿಲ್ ಜಭಿ ವುಲ್ಲಾ ಖಾನ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4