ತುಮಕೂರು: ಕೌಟುಂಬಿಕ ಗಲಾಟೆ ಹಿನ್ನೆಲೆ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತುಮಕೂರು ತಾಲೂಕಿನ ಜಕ್ಕೆನಹಳ್ಳಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ದುರ್ಗದಹಳ್ಳಿ ಗ್ರಾಮದ ತಿಮ್ಮರಾಜು ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಜಕ್ಕೆನಹಳ್ಳಿ ಗ್ರಾಮದ ಹೆಂಡತಿ ಮನೆಗೆ ತಿಮ್ಮರಾಜು ಬಂದಿದ್ದರು. ಮೊನ್ನೆ ರಾತ್ರಿ ಗಂಡ ಹೆಂಡತಿ ಗಲಾಟೆಯಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx